ರಾಮಮಂದಿರ ಭೂಮಿ ಪೂಜೆ ಮೊದಲ ವಾರ್ಷಿಕೋತ್ಸದ ಅಂಗವಾಗಿ ಅಯೋಧ್ಯೆಯಲ್ಲಿ ವಿಶೇಷ ಕಾರ್ಯಕ್ರಮಗಳು
ಕಳೆದ ವರ್ಷ ಇದೇ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಭೂಮಿ ಪೂಜೆಯನ್ನು ನೆರವೇರಿಸಿದ್ದರು. ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಟ್ರಸ್ಟ್ ಆಯೋಜಿಸಿರುವ ವಿಶೇಷ ಕಾರ್ಯಕ್ರಮಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರು ಪಾಲ್ಗೊಂಡರು ಮತ್ತು ಪ್ರಧಾನಿ ಮೋದಿ ಅವರು ವರ್ಚ್ಯುಯಲ್ ಭಾಗವಹಿಸಿದರು
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಶ್ರೀ ರಾಮ ಜನ್ಮ ಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ನಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅಡಿಪಾಯದ ಶೇಕಡಾ 60 ರಷ್ಟು ಕೆಲಸ ಪೂರ್ಣಗೊಂಡಿದೆ. ಅಂದಹಾಗೆ ಇಂದು (ಆಗಸ್ಟ್ 5, ಗುರುವಾರ) ಮಂದಿರದ ನಿರ್ಮಾಣಕ್ಕೆ ಪೂಜೆ (ಭೂಮಿ ಪೂಜನ್) ನಡೆದು ಸರಿಯಾಗಿ ಒಂದು ವರ್ಷ ಕಳೆಯಿತು. ಮೊದಲ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ರಾಮ ಜನ್ಮ ಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಕಳೆದ ವರ್ಷ ಇದೇ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಭೂಮಿ ಪೂಜೆಯನ್ನು ನೆರವೇರಿಸಿದ್ದರು. ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಟ್ರಸ್ಟ್ ಆಯೋಜಿಸಿರುವ ವಿಶೇಷ ಕಾರ್ಯಕ್ರಮಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರು ಪಾಲ್ಗೊಂಡರು ಮತ್ತು ಪ್ರಧಾನಿ ಮೋದಿ ಅವರು ವರ್ಚ್ಯುಯಲ್ ಭಾಗವಹಿಸಿದರು. ಈ ಸಂದರ್ಭದಲ್ಲಿ ಯುಪಿ ಸರ್ಕಾರವು ಪಿಎಮ್ ಗರೀಬ್ ಕಲ್ಯಾಣ್ ಯೋಜನೆಯ ಫಲಾನುಭವನ್ನು 100ಕ್ಕಿಂತ ಹೆಚ್ಚು ಜನಕ್ಕೆ ವಿಸ್ತರಿಸಲು ನಿರ್ಧರಿಸಿದೆ.
ಹಾಗೆಯೇ, ಶ್ರೀ ರಾಮ ಜನ್ಮ ಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ಮಣೀವಾರ್ಪೇಟ್ನಲ್ಲಿ ‘ಸಾವನ್ ಮೇಲಾ’ ವನ್ನು ಬಹು ವಿಜೃಂಭಣೆಯಿಂದ ನಡೆಸಲು ನಿರ್ಧರಿಸಿದೆ. ಆಗಸ್ಟ್ 11ರಿಂದ ಆರಂಭವಾಗಲಿರುವ ಈ ಮೇಳವು 12 ದಿನಗಳ ಕಾಲ ನಡೆಯಲಿದೆ. ಸದರಿ ಮೇಳದಲ್ಲಿ ರಾಮಲಲ್ಲಾಗೆ ಬೆಳ್ಳಿ ತೊಟ್ಟಿಲನ್ನು ನಿರ್ಮಿಸಲು ಟ್ರಸ್ಟ್ ನಿರ್ಧರಿಸಿದೆ. ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ್ ಗೋಪಾಲ್ಜಿ ಅವರು ಸೋಮವಾರದಂದು ತೊಟ್ಟಿಲುಗಾಗಿ ಅಳತೆಗಳನ್ನು ತೆಗೆದುಕೊಂಡಿದ್ದರು.
ಇದನ್ನೂ ಓದಿ: Ram Mandir: ಅಯೋಧ್ಯೆ ರಾಮಮಂದಿರ ಭೂಮಿಪೂಜೆ ವಾರ್ಷಿಕೋತ್ಸವ; ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಪ್ರಧಾನಿ ಮೋದಿ