ಹಾಸನಾಂಬೆ ಭಕ್ತರಿಗೆ ಗುಡ್‌ನ್ಯೂಸ್‌; ಅ.29ರಿಂದ ವಿಶೇಷ ರೈಲು, 200ಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ!

Edited By:

Updated on: Oct 27, 2026 | 9:25 AM

ಹಾಸನಾಂಬೆ ದರ್ಶನೋತ್ಸವ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದ್ದು, ಲಕ್ಷಾಂತರ ಭಕ್ತರಿಗೆ ಅನುಕೂಲವಾಗುವಂತೆ ರೈಲ್ವೇ ಇಲಾಖೆಯು ಹಾಸನ-ಬೆಂಗಳೂರು ಹಾಗೂ ಹಾಸನ-ಅರಸೀಕೆರೆ ನಡುವೆ ವಿಶೇಷ ರೈಲುಗಳನ್ನು ವ್ಯವಸ್ಥೆಗೊಳಿಸಿದೆ. ಇದರೊಂದಿಗೆ, ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ಗಳು ಮತ್ತು ದೇಗುಲದ ಸುತ್ತ ಉಚಿತ ವೈಫೈ ಸೌಲಭ್ಯವನ್ನೂ ಒದಗಿಸಲಾಗಿದೆ. ಇದು ಭಕ್ತರ ಸುಗಮ ಪ್ರಯಾಣ ಮತ್ತು ಸಂಪರ್ಕಕ್ಕೆ ಸಹಕಾರಿಯಾಗಲಿದೆ.

ಹಾಸನಾಂಬೆ ಜಾತ್ರಾ ಮಹೋತ್ಸವ ಅಕ್ಟೋಬರ್ 29 ರಿಂದ ನವೆಂಬರ್ 11 ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಲಕ್ಷಾಂತರ ಭಕ್ತರು ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಪಡೆಯಲಿದ್ದಾರೆ. ಹೆಚ್ಚುತ್ತಿರುವ ಭಕ್ತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ರೈಲ್ವೇ ಇಲಾಖೆ, ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತವು ಹಲವಾರು ವಿಶೇಷ ಸೌಲಭ್ಯಗಳನ್ನು ಒದಗಿಸಿದೆ. ಹಾಸನ ಮತ್ತು ಬೆಂಗಳೂರು, ಹಾಗೆಯೇ ಹಾಸನ ಮತ್ತು ಅರಸೀಕೆರೆ ನಡುವೆ ಎರಡು ವಿಶೇಷ ರೈಲುಗಳು ಸಂಚರಿಸಲಿವೆ. ಅಕ್ಟೋಬರ್ 29 ರಿಂದ ನವೆಂಬರ್ 11 ರವರೆಗೆ ಈ ರೈಲುಗಳು ಕಾರ್ಯಾಚರಿಸಲಿವೆ. ಈ ಸೇವೆಗಾಗಿ ಕೇಂದ್ರ ಸರ್ಕಾರವು ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೆ, ಸಾರಿಗೆ ಇಲಾಖೆ ಮಡಿಕೇರಿ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಹಾಸನದಿಂದ 200ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ನಿಯೋಜಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More