AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವನ ನಟನೆ ನೋಡೋದೇ ಆನಂದ’; ಜೀ ಕನ್ನಡ ವೇದಿಕೆ ಮೇಲೆ ರಾಕೇಶ್ ಪೂಜಾರಿಗೆ ವಿಶೇಷ ಗೌರವ

‘ಅವನ ನಟನೆ ನೋಡೋದೇ ಆನಂದ’; ಜೀ ಕನ್ನಡ ವೇದಿಕೆ ಮೇಲೆ ರಾಕೇಶ್ ಪೂಜಾರಿಗೆ ವಿಶೇಷ ಗೌರವ

ರಾಜೇಶ್ ದುಗ್ಗುಮನೆ
|

Updated on: May 22, 2025 | 8:56 AM

Share

‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿನ್ನರ್ ರಾಕೇಶ್ ಪೂಜಾರಿ ಅವರು ನಿಧನ ಹೊಂದಿದ್ದಾರೆ. ಹಾರ್ಟ್ ಅಟ್ಯಾಕ್​ನಿಂದ ಅವರ ಜೀವನ ಕೊನೆ ಆಗಿದೆ. ಅವರಿಗೆ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿನ್ನರ್ ಹಾಗೂ ‘ಕಾಂತಾರ: ಚಾಪ್ಟರ್ 1’ ನಟ ರಾಕೇಶ್ ಪೂಜಾರಿ (Rakesh Poojary) ಅವರು ಇತ್ತೀಚೆಗೆ ನಿಧನ ಹೊಂದಿದರು. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಜೀ ಕನ್ನಡ ವಾಹಿನಿ ಜೊತೆ ಒಳ್ಳೆಯ ಒಡನಾಟ ಹೊಂದಿದ್ದರು. ಈ ವಾಹಿನಿಯ ವಿವಿಧ ಶೋಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದರು. ಈಗ ಅವರ ಮರಣದ ಹಿನ್ನೆಲೆಯಲ್ಲಿ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಈ ವೇಳೆ ಎಲ್ಲರೂ ಕಣ್ಣೀರು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More