AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸಿದ್ದರಾಮಯ್ಯ ಜನತಾ ದರ್ಶನ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ವಯೋವೃದ್ಧರ ಬಗ್ಗೆ ಹೆಚ್ಚಿನ ಮುತುವರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಜನತಾ ದರ್ಶನ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ವಯೋವೃದ್ಧರ ಬಗ್ಗೆ ಹೆಚ್ಚಿನ ಮುತುವರ್ಜಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 08, 2024 | 12:26 PM

Share

ರಾಜ್ಯದ ಎಲ್ಲ ಮೂಲೆಗಳಿಂದ ಜನ ಆಗಮಿಸಿದ್ದು ತಮ್ಮ ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಯವರಲ್ಲಿ ಹೇಳಿಕೊಳ್ಳುತ್ತಿದ್ದಾರೆ. ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಪ್ರಯತ್ನ ಸಿದ್ದರಾಮಯ್ಯ ಮತ್ತು ಅಧಿಕಾರಿಗಳು ಮಾಡುತ್ತಿದ್ದಾರೆ. ಜನತಾ ಕಾರ್ಯಕ್ರಮಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ವಿಕಲ ಚೇತನರು, ವಿಶಿಷ್ಟ ಚೇತನರು, ವಯೋವೃದ್ಧರು ಆಗಮಿಸಿದ್ದಾರೆ.

ಬೆಂಗಳೂರು: ಸರ್ಕಾರೀ ಕಚೇರಿಗಳಲ್ಲಿ ನಡೆಯುವ ಭ್ರಷ್ಟಾಚಾರವನ್ನು (corruption) ನಿರ್ಮೂಲ ಮಾಡಬೇಕಾದರೆ ಜನಸ್ಪಂದನ (Jana Spandana) ಮತ್ತು ಜನತಾ ದರ್ಶನ (Janata Darshan) ಕಾರ್ಯಕ್ರಮಗಳು ಪ್ರತಿ ತಿಂಗಳು ಪ್ರತಿ ಜಿಲ್ಲೆಯಲ್ಲಿ ನಡೆಯಬೇಕೆಂದು ನಾವು ಈಗಾಗಲೇ ಹೇಳಿದ್ದೇವೆ. ಸರ್ಕಾರ ಯಾವುದೇ ಆಗಿರಲಿ, ಸರ್ಕಾರಿ ಕಚೇರಿಗಳ್ಲಿ ’ಮಾಮೂಲು’ ಮಾಮೂಲು! ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನ ಸೌಧದ ಆವರಣದಲ್ಲಿ ಬೃಹತ್ ಪ್ರಮಾಣದಲ್ಲಿ ಜನತಾ ಕಾರ್ಯಕ್ರಮ ನಡೆಸುತ್ತಿದ್ದಾರೆ. ರಾಜ್ಯದ ಎಲ್ಲ ಮೂಲೆಗಳಿಂದ ಜನ ಆಗಮಿಸಿದ್ದು ತಮ್ಮ ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಯವರಲ್ಲಿ ಹೇಳಿಕೊಳ್ಳುತ್ತಿದ್ದಾರೆ. ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಪ್ರಯತ್ನ ಸಿದ್ದರಾಮಯ್ಯ ಮತ್ತು ಅಧಿಕಾರಿಗಳು ಮಾಡುತ್ತಿದ್ದಾರೆ. ಜನತಾ ಕಾರ್ಯಕ್ರಮಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ವಿಕಲ ಚೇತನರು, ವಿಶಿಷ್ಟ ಚೇತನರು, ವಯೋವೃದ್ಧರು ಆಗಮಿಸಿದ್ದಾರೆ. ಗಮನಿಸಬೇಕಾದ ಸಂಗತಿಯೆಂದರೆ, ಕಾರ್ಯಕ್ರಮಕ್ಕೆ ನಿಯೋಜಿಸಲ್ಪಟ್ಟಿರುವ ಸಿಬ್ಬಂದಿ ಮತ್ತು ಭದ್ರತಾ ವರ್ಗದವರು ಅಸಹಾಯಕರು ಮತ್ತು ಅಂಗವಿಕಲರಿಗೆ ಸೂಕ್ತವಾಗಿ ನೆರವಾಗುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ