ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಶಿವರಾಜ್ಕುಮಾರ್ ಅವರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಅಥಣಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋ ಚಿತ್ರೀಕರಣದ ಸೆಟ್ನಲ್ಲಿ ಅವರನ್ನು ಭೇಟಿ ಮಾಡಲಾಗಿದೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ವಿಶೇಷ ಚೇತನ ಅಭಿಮಾನಿಗೆ ಶಿವಣ್ಣ ಆರ್ಥಿಕ ಸಹಾಯ ಮಾಡಿದ್ದಾರೆ.
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ (Shivarajkumar) ಎಂದರೆ ಅಭಿಮಾನಿಗಳಿಗೆ ಸಖತ್ ಇಷ್ಟ. ಶಿವಣ್ಣ ಕೂಡ ಅಭಿಮಾನಿಗಳನ್ನು ಪ್ರೀತಿಯಿಂದ ಕಾಣುತ್ತಾರೆ. ‘ಅಭಿಮಾನಿ ದೇವರುಗಳು’ ಎಂದು ನಂಬಿದ ಫ್ಯಾಮಿಲಿ ಅವರದ್ದು. ಆ ಮಾತಿಗೆ ಆಗಾಗ ಸಾಕ್ಷಿ ಸಿಗುತ್ತಲೇ ಇರುತ್ತದೆ. ಅಥಣಿಯಿಂದ ಶಿವಣ್ಣ ಅವರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಬೆಂಗಳೂರಿಗೆ ಬಂದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ (DKD) ರಿಯಾಲಿಟಿ ಶೋ ಚಿತ್ರೀಕರಣದ ಸೆಟ್ನಲ್ಲಿ ಅವರನ್ನು ಭೇಟಿ ಮಾಡಲಾಗಿದೆ. ಶಿವಣ್ಣ (Shivanna) ಅವರು ವಿಶೇಷ ಚೇತನ ಅಭಿಮಾನಿಗೆ ಫೋಟೋ ನೀಡಿ, ಆರ್ಥಿಕ ಸಹಾಯ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಿ ಫೋಟೋ ತೆಗೆದುಕೊಂಡ ಆ ಅಭಿಮಾನಿ ಸಖತ್ ಖುಷಿಪಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

