ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ

Updated on: Mar 23, 2026 | 10:11 PM

ಶಿವರಾಜ್​ಕುಮಾರ್ ಅವರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಅಥಣಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋ ಚಿತ್ರೀಕರಣದ ಸೆಟ್​​ನಲ್ಲಿ ಅವರನ್ನು ಭೇಟಿ ಮಾಡಲಾಗಿದೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ವಿಶೇಷ ಚೇತನ ಅಭಿಮಾನಿಗೆ ಶಿವಣ್ಣ ಆರ್ಥಿಕ ಸಹಾಯ ಮಾಡಿದ್ದಾರೆ.

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಎಂದರೆ ಅಭಿಮಾನಿಗಳಿಗೆ ಸಖತ್ ಇಷ್ಟ. ಶಿವಣ್ಣ ಕೂಡ ಅಭಿಮಾನಿಗಳನ್ನು ಪ್ರೀತಿಯಿಂದ ಕಾಣುತ್ತಾರೆ. ‘ಅಭಿಮಾನಿ ದೇವರುಗಳು’ ಎಂದು ನಂಬಿದ ಫ್ಯಾಮಿಲಿ ಅವರದ್ದು. ಆ ಮಾತಿಗೆ ಆಗಾಗ ಸಾಕ್ಷಿ ಸಿಗುತ್ತಲೇ ಇರುತ್ತದೆ. ಅಥಣಿಯಿಂದ ಶಿವಣ್ಣ ಅವರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಬೆಂಗಳೂರಿಗೆ ಬಂದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ (DKD) ರಿಯಾಲಿಟಿ ಶೋ ಚಿತ್ರೀಕರಣದ ಸೆಟ್​​ನಲ್ಲಿ ಅವರನ್ನು ಭೇಟಿ ಮಾಡಲಾಗಿದೆ. ಶಿವಣ್ಣ (Shivanna) ಅವರು ವಿಶೇಷ ಚೇತನ ಅಭಿಮಾನಿಗೆ ಫೋಟೋ ನೀಡಿ, ಆರ್ಥಿಕ ಸಹಾಯ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಿ ಫೋಟೋ ತೆಗೆದುಕೊಂಡ ಆ ಅಭಿಮಾನಿ ಸಖತ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More