ಪಾಲ್ಘರ್‌ನಲ್ಲಿ ಪಾದಚಾರಿಗೆ ಡಿಕ್ಕಿ ಹೊಡೆದು ರಸ್ತೆಯುದ್ದಕ್ಕೂ ಎಳೆದೊಯ್ದ ಕಾರು; ವಿಡಿಯೋ ವೈರಲ್
ಪಾಲ್ಘರ್ ಪ್ರದೇಶದಲ್ಲ ಪಾದಚಾರಿಗೆ ಡಿಕ್ಕಿ ಹೊಡೆದು ಕಾರೊಂದು ರಸ್ತೆಯುದ್ದಕ್ಕೂ ಆತನನ್ನು ಎಳೆದುಕೊಂಡು ಹೋಗಿದೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು ಹತ್ತಾರು ಮೀಟರ್‌ಗಳಷ್ಟು ರಸ್ತೆಯ ಉದ್ದಕ್ಕೂ ಎಳೆದುಕೊಂಡು ಹೋದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಇತ್ತೀಚೆಗೆ ಸಿಸಿಟಿವಿ ವಿಡಿಯೋ ವೈರಲ್ ಆದ ನಂತರ ಬೆಳಕಿಗೆ ಬಂದಿದೆ.ಘಟನೆಯ ನಂತರ ಕಾರು ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಪೊಲೀಸರು ಪ್ರಸ್ತುತ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಮುಂಬೈ: ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ನಡೆದ ಆಘಾತಕಾರಿ ಹಿಟ್ ಆ್ಯಂಡ್ ರನ್ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದೆ. ವೇಗವಾಗಿ ಬಂದ ಕಾರು ಪಾದಚಾರಿ ಮಚಿಂದ್ರ ಬಾಗಲ್ ಅವರಿಗೆ ಡಿಕ್ಕಿ ಹೊಡೆದು, ಅವರನ್ನು ಹತ್ತಾರು ಮೀಟರ್‌ಗಳಷ್ಟು ಎಳೆದುಕೊಂಡು ಹೋಯಿತು. ಈ ಘಟನೆ ಕಳೆದ ವಾರ ನಡೆದಿದ್ದು, ಇತ್ತೀಚೆಗೆ ಸಿಸಿಟಿವಿ ವಿಡಿಯೋ ವೈರಲ್ ಆದ ನಂತರ ಬೆಳಕಿಗೆ ಬಂದಿದೆ.ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀಡಿಯೊದಲ್ಲಿ ವೇಗವಾಗಿ ಬಂದ ಕಾರು ಮಚಿಂದ್ರ ಬಾಗಲ್ ಅವರಿಗೆ ಡಿಕ್ಕಿ ಹೊಡೆದು ರಸ್ತೆಯ ಉದ್ದಕ್ಕೂ ಎಳೆದುಕೊಂಡು ಹೋಗುವುದನ್ನು ನೋಡಬಹುದು. ಗಾಯಗೊಂಡ ವ್ಯಕ್ತಿ ಪ್ರಸ್ತುತ ಬೋಯಿಸರ್‌ನ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಈ ಘಟನೆಯ ನಂತರ ಕಾರು ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಪೊಲೀಸರು ಪ್ರಸ್ತುತ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್ ತಡಕಾಡಿದ ಅಜ್ಜಿ

ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
