ಬೈಕ್​​ ಡಿಕ್ಕಿ ರಭಸಕ್ಕೆ ಮುರಿದುಬಿದ್ದ ವಿದ್ಯುತ್​​ ಕಂಬ: ಸವಾರರು ಬದುಕಿದ್ದೇ ಪವಾಡ!

Edited By:

Updated on: Feb 17, 2026 | 12:34 PM

ಬೈಕ್​​ ಗುದ್ದಿದ ರಭಸಕ್ಕೆ ವಿದ್ಯುತ್​​ ಕಂಬವೇ ತುಂಡಾಗಿ ಬಿದ್ದಿದ್ದು, ಸವಾರರು ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿರುವ ಭೀಕರ ಅಪಘಾತದ ದೃಶ್ಯ ಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಝಲ್​ ಎನಿಸುವಂತಿದೆ. ಬೈಕ್​​ ಸವಾರರನ್ನು ವಿಜಯಪುರ ಮೂಲದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಮಂಗಳೂರು, ಫೆಬ್ರವರಿ 17: ವೇಗವಾಗಿ ಬಂದ ಬೈಕ್​​ ನಿಯಂತ್ರಣ ತಪ್ಪಿ ವಿದ್ಯುತ್​​ ಕಂಬಕ್ಕೆ ಗುದ್ದಿದ ಪರಿಣಾಮ ಕಂಬವೇ ತುಂಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದಲ್ಲಿ ವಿಜಯಪುರ ಮೂಲದ ಇಬ್ಬರು ವಿದ್ಯಾರ್ಥಿಗಳು ಪವಾಡಸದೃಶ ಎಂಬಂತೆ ಪಾರಾಗಿದ್ದಾರೆ.  ಕಂಬ ತುಂಡಾಗುತ್ತಲೇ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 17, 2026 12:33 PM
Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More