Video: ನಿಯಂತ್ರಣ ತಪ್ಪಿ ಸೈಕಲ್ ಸವಾರನ ಮೇಲೆ ಹರಿದು, ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್

Updated on: Apr 29, 2026 | 3:21 PM

ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ ಬೆಚ್ಚಿಬೀಳಿಸುವ ಅಪಘಾತವೊಂದು ನಡೆದಿದೆ. ವೇಗವಾಗಿ ಬಂದ ಮರಳು ತುಂಬಿದ ಟ್ರ್ಯಾಕ್ಟರ್ ಟ್ರಾಲಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಸೈಕಲ್ ಸವಾರನ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರ್ಯಾಕ್ಟರ್ ಅಷ್ಟಕ್ಕೇ ನಿಲ್ಲದೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಚಾಲಕರು ಮಿತಿಯೊಳಗೆ ವಾಹನ ಚಾಲನೆ ಮಾಡಬೇಕು ಮತ್ತು ನಿಯಮ ಮೀರಿ ಭಾರವನ್ನು ಹೇರುವುದು ಕೇವಲ ತಮಗಷ್ಟೇ ಅಲ್ಲ, ರಸ್ತೆಯಲ್ಲಿರುವ ಇತರ ಅಮಾಯಕರಿಗೂ ಪ್ರಾಣಕ್ಕೆ ಕುತ್ತು ತರುತ್ತದೆ ಎಂಬುದನ್ನು ಮರೆಯಬಾರದು. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಲಕ್ನೋ, ಏಪ್ರಿಲ್ 29:ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ ಬೆಚ್ಚಿಬೀಳಿಸುವ ಅಪಘಾತವೊಂದು ನಡೆದಿದೆ. ವೇಗವಾಗಿ ಬಂದ ಮರಳು ತುಂಬಿದ ಟ್ರ್ಯಾಕ್ಟರ್ ಟ್ರಾಲಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಸೈಕಲ್ ಸವಾರನ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರ್ಯಾಕ್ಟರ್ ಅಷ್ಟಕ್ಕೇ ನಿಲ್ಲದೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಚಾಲಕರು ಮಿತಿಯೊಳಗೆ ವಾಹನ ಚಾಲನೆ ಮಾಡಬೇಕು ಮತ್ತು ನಿಯಮ ಮೀರಿ ಭಾರವನ್ನು ಹೇರುವುದು ಕೇವಲ ತಮಗಷ್ಟೇ ಅಲ್ಲ, ರಸ್ತೆಯಲ್ಲಿರುವ ಇತರ ಅಮಾಯಕರಿಗೂ ಪ್ರಾಣಕ್ಕೆ ಕುತ್ತು ತರುತ್ತದೆ ಎಂಬುದನ್ನು ಮರೆಯಬಾರದು. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More