ಚೆನ್ನೈ- ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್ ಡಿಕ್ಕಿಯಾಗಿ ಪಲ್ಟಿ ಹೊಡೆದ ಬಸ್; ಭೀಕರ ವಿಡಿಯೋ ವೈರಲ್
ತಮಿಳುನಾಡಿನ ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಯು-ಟರ್ನ್ ಮಾಡುತ್ತಿದ್ದ ಖಾಸಗಿ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ; ಬಸ್ ಪಲ್ಟಿಯಾಗಿ ಬಿದ್ದಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ ಪಕ್ಕಕ್ಕೆ ಉರುಳಿ ಬಿದ್ದಿರುವುದು ವಿಡಿಯೋದಲ್ಲಿದೆ.
ಚೆನ್ನೈ: ತಮಿಳುನಾಡಿನ ಶ್ರೀಪೆರಂಬದೂರು ಸಮೀಪದ ತಾಂಡಲಂ ಬಳಿ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಖಾಸಗಿ ಬಸ್ಸೊಂದು ಟ್ರಕ್‌ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಅಪಘಾತ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಕ್ಕಕ್ಕೆ ಉರುಳಿ ಬಿದ್ದಿರುವುದು ವಿಡಿಯೋದಲ್ಲಿದೆ. ಸ್ಥಳದಲ್ಲಿದ್ದ ಜನರು ಸಂತ್ರಸ್ತರಿಗೆ ಸಹಾಯ ಮಾಡಲು ಬಸ್‌ಗೆ ಧಾವಿಸಿದರು. ಅವರು ಬಸ್ಸಿನ ಒಳಗಿನಿಂದ ಜನರನ್ನು ತೆಗೆದುಹಾಕುವುದನ್ನು ಕಾಣಬಹುದು. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ