ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಖಡಕ್ ಸ್ಪಷ್ಟನೆ

Edited By:

Updated on: May 06, 2026 | 10:35 PM

ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಸ್ಪೀಕರ್ ಯುಟಿ ಖಾದರ್ ಪ್ರಮಾಣವಚನ ಬೋಧಿಸಿದರು. ಬಳಿಕ ಬಿಜೆಪಿ ಆರೋಪಗಳಿಗೆ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಸ್ಪೀಕರ್ ಯುಟಿ ಖಾದರ್ (UT Khader) ಪ್ರಮಾಣವಚನ ಬೋಧಿಸಿದರು. ಬಳಿಕ ಬಿಜೆಪಿ ಆರೋಪಗಳಿಗೆ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ.

ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ ತಮ್ಮ ಮೇಲೆ ಬಿಜೆಪಿ ಮಾಡಿದ್ದ ಆರೋಪದ ಬಗ್ಗೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್, ಆಯೋಗ ಪ್ರಮಾಣಪತ್ರ ನೀಡಿದ ಬಳಿಕ ಪ್ರಮಾಣವಚನ ಬೋಧಿಸಬೇಕು. ಹೀಗಾಗಿ ಆಯೋಗ ಪ್ರಮಾಣಪತ್ರ ನೀಡಿದ್ದರಿಂದ ಪ್ರಮಾಣವಚನ ಬೋಧಿಸಿದ್ದೇನೆ. ಒಂದು ವೇಳೆ ಕೋರ್ಟ್ ತಡೆಯಾಜ್ಞೆ ಕೊಟ್ಟರೆ ಡಿ.ಎನ್.ಜೀವರಾಜ್​ ಶಾಸಕ ಸ್ಥಾನ ರದ್ದಾಗಲಿದೆ. ನಂತರ ಟಿ.ಡಿ.ರಾಜೇಗೌಡರಿಗೆ ಪ್ರಮಾಣವಚನ ಬೋಧಿಸಬೇಕಾಗಬಹುದು. ಕಾನೂನು ಇರುವುದೇ ಹಾಗೆ, ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ನೋಡಿ: ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್

Published on: May 06, 2026 10:34 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More