Temple Tour: ಸಂತಾನ ಭಾಗ್ಯ ಕರುಣಿಸುವ ತಾಯಿ ಸವದತ್ತಿ ಯಲ್ಲಮ್ಮ
ಮಕ್ಕಳಿಲ್ಲದವರು ಯಲ್ಲಮ್ಮನ ದೇವಸ್ಥಾನದಲ್ಲಿರುವ ಪರಶುರಾಮನ ತೊಟ್ಟಿಲು ತೂಗುವ ಹರಕೆ ಹೊತ್ತು ತೂಗುತ್ತಾರೆ. ಇದರಿಂದ ಸಂತಾನ ಭಾಗ್ಯ ಸಿಗುತ್ತದೆ ಎಂಬ ನಂಬಿಕೆ ಇದೆ.
ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಒಂದಾಗಿರುವ ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮನ ಆಲಯ ಈ ಭಾಗದ ಶಕ್ತಿಪೀಠವಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮ ಕ್ಷೇತ್ರಕ್ಕೆ ಸುಮಾರು 3,000 ಸಾವಿರ ವರ್ಷಗಳ ಇತಿಹಾಸವಿದೆ. ಪುರಾಣಗಳಲ್ಲಿ ಉಲ್ಲೇಖವಿರುವ ಜಮದಗ್ನಿ ಮುನಿಯ ಪತ್ನಿ ರೇಣುಕಾ ತಾಯಿಯೇ ಈ ಯಲ್ಲಮ್ಮ. ಮಗನಿಗೆ ನೀಡಿದ ವಾಗ್ದಾನದಂತೆ ರೇಣುಕಾ ತಾಯಿಯೇ ಯಲ್ಲಮ್ಮನಾಗಿ ಏಳು ಕೊಳ್ಳದ ಸವದತ್ತಿಗೆ ಬಂದು ಪ್ರತಿಷ್ಠಾಪನೆಗೊಂಡಳು ಎಂಬ ಐತಿಹ್ಯವಿದೆ. ಮಕ್ಕಳಿಲ್ಲದವರು ಯಲ್ಲಮ್ಮನ ದೇವಸ್ಥಾನದಲ್ಲಿರುವ ಪರಶುರಾಮನ ತೊಟ್ಟಿಲು ತೂಗುವ ಹರಕೆ ಹೊತ್ತು ತೂಗುತ್ತಾರೆ. ಇದರಿಂದ ಸಂತಾನ ಭಾಗ್ಯ ಸಿಗುತ್ತದೆ ಎಂಬ ನಂಬಿಕೆ ಇದೆ.