ರಮೇಶ್ ಜಾರಕಿಹೊಳಿಗೆ ನಿನ್ನೆಯೇ ಫೋನ್ ಮಾಡಿದ್ದೇನೆ, ಪ್ರತಿಭಟನೆಯಲ್ಲಿ ಭಾಗವಹಿಸಬಹುದು: ವಿಜಯೇಂದ್ರ
ರಮೇಶ್ ಜಾರಕಿಹೊಳಿ ಅವರು ಬಸನಗೌಡ ಪಾಟೀಲ್ ಯತ್ನಾಳ್ ಬಣದವರು, ಮತ್ತು ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗಿಳಿಸಬೇಕೆಂದು ಆಗ್ರಹಿಸಿದವರು. ಯತ್ನಾಳ್ ಉಚ್ಚಾಟನೆ ಬಳಿಕ ಅವರ ಮೌನವಾಗಿರೋದು ನಿಜವಾದರೂ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ರಾಜ್ಯದ ಬಿಜೆಪಿ ನಾಯಕರೆಲ್ಲ ನಿನ್ನೆಯಿಂದ ಬೆಳಗಾವಿಯಲ್ಲಿದ್ದಾರೆ, ಅದರೆ ಜಾರಕಿಹೊಳಿ ಮಾತ್ರ ಕಾಣಿಸಿಕೊಂಡಿಲ್ಲ.
ಬೆಳಗಾವಿ, ಏಪ್ರಿಲ್ 16: ಬೆಳಗಾವಿಯ ನಿಪ್ಪಾಣಿಯಲ್ಲಿ ನಿನ್ನೆ ಭೀಮ ಹೆಜ್ಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಬಿಜೆಪಿ ನಾಯಕರು ಬೆಳಗಾವಿ ನಗರದಲ್ಲಿ ಜನಾಕ್ರೋಶ ಯಾತ್ರೆಯನ್ನು (Janakrosha Yatre) ಮುಂದುವರಿಸಿದ್ದಾರೆ. ಇವತ್ತಿನ ಪ್ರತಿಭಟನೆಯಲ್ಲಿ ಜಿಲ್ಲೆಯ ಪ್ರಭಾವಿ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಭಾಗವಹಿಸುವರೇ ಎಂದು ಕೇಳಿದ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಲ್ಲಿ ಸ್ಪಷ್ಟವಾದ ಉತ್ತರವಿಲ್ಲ. ಅವರು ಭಾಗವಹಿಸುವ ನಿರೀಕ್ಷೆ ಇದೆ, ನಿನ್ನೆಯೇ ಫೋನ್ ಕರೆ ಮಾಡಿ ತಿಳಿಸಿದ್ದೆ, ಆದರೆ ಬ್ಯೂಸಿಯಿದ್ದ ಕಾರಣ ಅವರು ನಿನ್ನೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದರು.
ಇದನ್ನೂ ಓದಿ: BJP Janakrosh Yatra: ಚುನಾವಣೆ ಹತ್ತಿರದಲ್ಲಿಲ್ಲ, ಹೋರಾಟದ ಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ ವಾಗ್ದಾಳಿ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ

ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್ಗೆ ಸಖತ್ ತೊಂದರೆ

Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ

ಚಹಲ್ ಚಮತ್ಕಾರ: 3 ಓವರ್ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
