Sreeleela: ದರ್ಶನ್ ಬಗ್ಗೆ ಕೇಳಿದ್ದಕ್ಕೆ ನೋ ರಿಯಾಕ್ಷನ್ ಎಂದ ನಟಿ ಶ್ರೀಲೀಲಾ

Updated on: Jun 21, 2024 | 12:11 PM

ಸೆಲೆಬ್ರಿಟಿಗಳಿಗೆ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಳಲಾಗುತ್ತಿದೆ. ಈಗ ನಟಿ ಶ್ರೀಲೀಲಾ ಅವರಿಗೂ ಇದೇ ರೀತಿಯ ಪ್ರಶ್ನೆ ಎದುರಾಗಿದೆ. ಅವರು ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಲ್ಲಿ ಯೋಗ ಮಾಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಸ್ಯಾಂಡಲ್​​ವುಡ್ ಸೆಲೆಬ್ರಿಟಿಗಳು ಎಲ್ಲೇ ಹೋದರು ಅವರಿಗೆ ದರ್ಶನ್ (Darshan) ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಳಲಾಗುತ್ತಿದೆ. ಈಗ ನಟಿ ಶ್ರೀಲೀಲಾ ಅವರಿಗೂ ಇದೇ ರೀತಿಯ ಪ್ರಶ್ನೆ ಎದುರಾಗಿದೆ. ಅವರು ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಲ್ಲಿ ಯೋಗ ಮಾಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ‘ದರ್ಶನ್ ಕೇಸ್ ಬಗ್ಗೆ ಹೇಳಿ’ ಎಂದು ಅವರಿಗೆ ಕೇಳಲಾಗಿದೆ. ಇದಕ್ಕೆ ಉತ್ತರಿಸೋಕೆ ನಿರಾಕರಿಸಿದ್ದಾರೆ. ‘ಯೋಗ ದಿನಾಚರಣೆ ಬಗ್ಗೆ ಮಾತ್ರ ಕೇಳಿ’ ಎಂದಷ್ಟೇ ಅವರು ಹೇಳಿಕೆ ನೀಡುವುದರಿಂದ ತಪ್ಪಿಸಿಕೊಂಡಿದ್ದಾರೆ. ಸದ್ಯ ಶ್ರೀಲೀಲಾ ಅವರು ತೆಲುಗು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More