AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕೆಟ್​ ಉರುಳುತ್ತಿದ್ದಂತೆ ದೇವರ ಫೋಟೋವನ್ನು ಹಣೆಗೊತ್ತಿ ಕೈ ಮುಗಿದ ಗೋಯೆಂಕಾ

ವಿಕೆಟ್​ ಉರುಳುತ್ತಿದ್ದಂತೆ ದೇವರ ಫೋಟೋವನ್ನು ಹಣೆಗೊತ್ತಿ ಕೈ ಮುಗಿದ ಗೋಯೆಂಕಾ

ಪೃಥ್ವಿಶಂಕರ
|

Updated on: Apr 05, 2026 | 5:57 PM

Share

Sanjiv Goenka's Viral IPL Reaction: ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ IPLನಲ್ಲಿ ತಮ್ಮ ವಿವಾದಿತ ವರ್ತನೆಗಳಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ಡೆಲ್ಲಿ ವಿರುದ್ಧ ಸೋತಾಗ ರಿಷಭ್ ಪಂತ್‌ಗೆ ಬಹಿರಂಗವಾಗಿ ಕ್ಲಾಸ್ ತೆಗೆದುಕೊಂಡಿದ್ದ ಗೋಯೆಂಕಾ, ಇತ್ತೀಚೆಗೆ ಸನ್‌ರೈಸರ್ಸ್ ವಿರುದ್ಧ ಇಶಾನ್ ಕಿಶನ್ ವಿಕೆಟ್ ಪತನದ ಬಳಿಕ ದೇವರ ಫೋಟೋ ಹಿಡಿದು ಪ್ರಾರ್ಥಿಸಿದ ಫೋಟೋ ವೈರಲ್ ಆಗಿದೆ. ಈ ಹಿಂದೆಯೂ ಆಟಗಾರರೊಂದಿಗೆ ಅವರ ವರ್ತನೆ ಬಗ್ಗೆ BCCI ಎಚ್ಚರಿಕೆ ನೀಡಿತ್ತು.

ಐಪಿಎಲ್‌ನಲ್ಲಿ ಲಕ್ನೋ ತಂಡ ತನ್ನ ಪ್ರದರ್ಶನದಿಂದ ಸದ್ದು ಮಾಡಿದ್ದಕ್ಕಿಂತ ಹೆಚ್ಚಾಗಿ ಆ ತಂಡದ ಮಾಲೀಕ ಸಂಜೀವ್ ಗೋಯೆಂಕಾ ತಮ್ಮ ನಡವಳಿಕೆಗಳಿಂದ ಸುದ್ದಿಯಾಗಿದ್ದಾರೆ. ಈ ಹಿಂದಿನ ಸೀಸನ್​ಗಳಲ್ಲಿ ತಂಡದ ನಾಯಕರನ್ನು ಕ್ರೀಡಾಂಗಣದಲ್ಲೇ ಬಹಿರಂಗವಾಗಿ ನಿಂಧಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಗೋಯೆಂಕಾ, ಈ ಆವೃತ್ತಿಯಲ್ಲೂ ಅದೇ ಪ್ರವೃತ್ತಿಯನ್ನು ಮುಂದುವರೆಸಿದ್ದರು. ಲಕ್ನೋ ತಂಡ ಡೆಲ್ಲಿ ವಿರುದ್ಧ ಸೋತಾಗ ತಂಡದ ನಾಯಕ ರಿಷಭ್ ಪಂತ್​ಗೆ ಗೋಯೆಂಕಾ ಮೈದಾನದಲ್ಲೇ ಕ್ಲಾಸ್ ತೆಗೆದುಕೊಂಡಿದ್ದರು. ಇದನ್ನು ಗಮನಿಸಿದ್ದ ಬಿಸಿಸಿಐ, ಬಹಿರಂಗವಾಗಿ ಆಟಗಾರರನ್ನು ಅಥವಾ ನಾಯಕರನ್ನು ನಿಂಧಿಸಿದಂತೆ ಎಲ್ಲಾ ತಂಡಗಳ ಮಾಲೀಕರಿಗೆ ಖಡಕ್ ಸಂದೇಶ ರವಾನಿಸಿತ್ತು. ಇದೀಗ ಇದೆಲ್ಲದರ ನಡುವೆ ಇದೀಗ ಸಂಜೀವ್ ಗೋಯೆಂಕಾ ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.

ವಾಸ್ತವವಾಗಿ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್​ಜೈಂಟ್ಸ್ ತಂಡ, ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಅವರ ತವರು ನೆಲದಲ್ಲಿ ಎದುರಿಸಿತ್ತು. ಸನ್‌ರೈಸರ್ಸ್ ತಂಡಕ್ಕೆ ಇದು ತವರು ಪಂದ್ಯವಾಗಿದ್ದರಿಂದ ತಂಡದಿಂದ ಸ್ಫೋಟಕ ಬ್ಯಾಟಿಂಗ್​ನ ನಿರೀಕ್ಷೆ ಇತ್ತು. ಆದರೆ ಇದಕ್ಕೆ ಲಕ್ನೋ ವೇಗಿಗಳು ಅವಕಾಶ ಮಾಡಿಕೊಡಲಿಲ್ಲ. ತಂಡದ ಪ್ರಮುಖ 4 ವಿಕೆಟ್​ಗಳು ಬಹುಬೇಗನೇ ಉದುರಿದವು. ಇದರಿಂದ ಸನ್‌ರೈಸರ್ಸ್ ತಂಡದ ರನ್ ವೇಗ ಪಾತಳಕ್ಕೆ ಕುಸಿಯಿತು. ಇದೆಲ್ಲದರ ನಡುವೆ ಸನ್‌ರೈಸರ್ಸ್ ತಂಡದ ನಾಯಕ ಇಶಾನ್ ಕಿಶನ್ ಅವರ ವಿಕೆಟ್ ಬಿದ್ದಾಗ, ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನೀಡಿದ ಪ್ರತಿಕ್ರಿಯೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸನ್‌ರೈಸರ್ಸ್ ತಂಡ ಪವರ್‌ಪ್ಲೇನಲ್ಲಿಯೇ ಪ್ರಮುಖ 3 ವಿಕೆಟ್​ಗಳನ್ನು ಕಳೆದುಕೊಂಡಿತು. ಅದರಲ್ಲೂ ಆರಂಭಿಕರಾದ ಅಭಿಷೇಕ್ ಶರ್ಮಾ ಖಾತೆ ತೆರೆಯದೆ ಔಟಾದರೆ, ಟ್ರಾವಿಸ್ ಹೆಡ್ ಕೂಡ 7 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಈ ಎರಡು ವಿಕೆಟ್​ಗಳು ಬಿದ್ದಾಗಲೇ ಸಾಕಷ್ಟು ಖುಷಿಯಲ್ಲಿದ್ದ ಗೋಯೆಂಕಾ ಅವರಿಗೆ ಅವರ ಖುಷಿಯನ್ನು ಇಮ್ಮಡಿಗೊಳಿಸುವ ಮತ್ತೊಂದು ಘಟನೆ ನಡೆಯಿತು. ಆರಂಭಿಕ ಆಘಾತದಿಂದ ತಂಡವನ್ನು ಮೇಲೇತ್ತುವ ಕೆಲಸ ಮಾಡುವ ಜವಾಬ್ದಾರಿ ಹೊತ್ತಿದ್ದ ತಂಡದ ನಾಯಕ ಇಶಾನ್ ಕಿಶನ್ ಕೂಡ ಇನ್ನಿಂಗ್ಸ್​ನ 4ನೇ ಓವರ್​ನಲ್ಲಿ ಕೇವಲ 1 ರನ್​ ಗಳಿಸಿ ಔಟಾದರು. ಕಿಶನ್ ಔಟಾದ ಕೂಡಲೇ ಸಂಜೀವ ಗೋಯೆಂಕಾ ತಮ್ಮ ಆಸನದಿಂದ ಮೇಲೆದ್ದು, ತಮ್ಮ ಕಿಸೆಯಲ್ಲಿದ್ದ ದೇವರ ಫೋಟೋವನ್ನು ಹೊರತೆಗೆದು ಅದನ್ನು ತಮ್ಮ ಹಣೆಗೆ ಒತ್ತಿಕೊಂಡರು. ನಂತರ ತಮ್ಮ ಎರಡು ಕೈಗಳನ್ನು ಜೋಡಿಸಿ ದೇವರಿಗೆ ನಮಸ್ಕರಿಸಿದರು. ಈ ವೇಳೆ ಅವರ ಮೊಗದಲ್ಲಿ ಸಂತಸ ತುಂಬಿ ತುಳುಕುತ್ತಿತ್ತು. ಇದೀಗ ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us