ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಖಡಕ್ ಎಚ್ಚರಿಕೆ

Updated on: Jan 11, 2026 | 9:39 PM

ವರದಾ-ಬೇಡ್ತಿ ನದಿ ಜೋಡಣೆ ವಿವಾದ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ ಹಾಗೂ ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರ ಬೆನ್ನಲ್ಲೇ ಉತ್ತರ ಕನ್ನಡದ ಜನರ, ಅದರಲ್ಲೂ ಯಲ್ಲಾಪುರ-ಶಿರಸಿ ಭಾಗದ ಜನರ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಯೋಜನೆಯನ್ನ ವಿರೋಧಿಸಿ ​ಸೋಂದಾ ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಇಂದು (ಜನವರಿ 11) ಜನಜಾಗೃತಿ ಸಮಾವೇಶವೂ ನಡೆದಿದ್ದು, ಹೋರಾಟ ತೀವ್ರಗತಿ ಪಡೆದುಕೊಂಡಿದೆ. ಈ ಯೋಜನೆ ಜಿಲ್ಲೆಗೆ ಮಾರಕ ಎಂದು ಒಕ್ಕೊರಲಿನಿಂದ ಖಂಡಿಸಲಾಗಿದ್ದು, ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಲಾಗಿದೆ.

ಶಿರಸಿ, (ಜನವರಿ 11): ವರದಾ-ಬೇಡ್ತಿ ನದಿ ಜೋಡಣೆ ವಿವಾದ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ ಹಾಗೂ ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರ ಬೆನ್ನಲ್ಲೇ ಉತ್ತರ ಕನ್ನಡದ ಜನರ, ಅದರಲ್ಲೂ ಯಲ್ಲಾಪುರ-ಶಿರಸಿ ಭಾಗದ ಜನರ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಯೋಜನೆಯನ್ನ ವಿರೋಧಿಸಿ ​ಸೋಂದಾ ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಇಂದು (ಜನವರಿ 11) ಜನಜಾಗೃತಿ ಸಮಾವೇಶವೂ ನಡೆದಿದ್ದು, ಹೋರಾಟ ತೀವ್ರಗತಿ ಪಡೆದುಕೊಂಡಿದೆ. ಈ ಯೋಜನೆ ಜಿಲ್ಲೆಗೆ ಮಾರಕ ಎಂದು ಒಕ್ಕೊರಲಿನಿಂದ ಖಂಡಿಸಲಾಗಿದ್ದು, ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಲಾಗಿದೆ.

ಇನ್ನು ಇಂದು ಸಮಾವೇಶದಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸ್ವಾಮೀಜಿ ಮಾತನಾಡಿ, ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಸ್ವಾಮೀಜಿ ಈ ಯೋಜನೆ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.