ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
Sri Lanka A vs India A: ಭಾರತ ಎ ವಿರುದ್ಧದ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎ ತಂಡ ಜಯ ಸಾಧಿಸಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್ಗಳಲ್ಲಿ 265 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿ ಬೆನ್ನತ್ತಿದ ಶ್ರೀಲಂಕಾ ಪಂದ್ಯವನ್ನು ಟೈ ಮಾಡಿಕೊಂಡಿದ್ದಾರೆ.
ಭಾರತ ಎ ವಿರುದ್ಧದ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎ ತಂಡ ಜಯ ಸಾಧಿಸಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್ಗಳಲ್ಲಿ 265 ರನ್ಗಳಿಸಿ ಆಲೌಟ್ ಆಗಿತ್ತು.
266 ರನ್ಗಳ ಗುರಿ ಪಡೆದ ಶ್ರೀಲಂಕಾ ಎ ತಂಡವು 49 ಓವರ್ಗಳ ಮುಕ್ತಾಯದ ವೇಳೆಗೆ ಕಲೆಹಾಕಿದ್ದು ಬರೋಬ್ಬರಿ 261 ರನ್ಗಳು. ಅದರಂತೆ ಕೊನೆಯ ಓವರ್ನಲ್ಲಿ ಕೇವಲ 5 ರನ್ಗಳ ಗುರಿ ಪಡೆದಿದ್ದರು.
ಆದರೆ ಟೀಮ್ ಇಂಡಿಯಾ ಪರ 50ನೇ ಓವರ್ ಎಸೆದ ಅರ್ಷದ್ ಖಾನ್ ಮೊದಲ ಎಸೆತದಲ್ಲಿ ಯಾವುದೇ ರನ್ ನೀಡಿರಲಿಲ್ಲ. 2ನೇ ಎಸೆತದಲ್ಲಿ ಸಮರವಿಕ್ರಮ (93) ರನ್ನು ಬೌಲ್ಡ್ ಮಾಡಿದರು. 3ನೇ ಎಸೆತದಲ್ಲಿ ಒಂದು ರನ್ ನೀಡಿದರು. 4ನೇ ಎಸೆತದಲ್ಲಿ 1 ರನ್ ಕಲೆಹಾಕಿದರು. 5ನೇ ಎಸೆತದಲ್ಲಿ ಮತ್ತೊಂದು ರನ್ ನೀಡಿದರು. ಅದರಂತೆ ಕೊನೆಯ ಎಸೆತದಲ್ಲಿ 2 ರನ್ ಬೇಕಿತ್ತು. ಈ ವೇಳೆ ಕೇವಲ ಒಂದು ರನ್ ಮಾತ್ರ ನೀಡುವ ಮೂಲಕ ಅರ್ಷದ್ ಖಾನ್ ಪಂದ್ಯವನ್ನು ಟೈನಲ್ಲಿ ಅಂತ್ಯಗೊಳಿಸಿದರು.
– ಭಾರತ ಎ- 265 (49.2)
– ಶ್ರೀಲಂಕಾ- 265/9 (50)
ಸೂಪರ್ ಓವರ್:
ಮ್ಯಾಚ್ ಟೈ ಆಗಿದ್ದ ಕಾರಣ ಫಲಿತಾಂಶಕ್ಕಾಗಿ ಸೂಪರ್ ಓವರ್ ಆಡಿಸಲಾಯಿತು. ಟೀಮ್ ಇಂಡಿಯಾ ಪರ ಸೂಪರ್ ಓವರ್ ಎಸೆದ ಅರ್ಷದ್ ಖಾನ್ ನೀಡಿದ್ದು ಬರೋಬ್ಬರಿ 16 ರನ್ಗಳು.
17 ರನ್ಗಳ ಗುರಿ ಬೆನ್ನತ್ತಲು ಬಂದ ಸೂರ್ಯಾಂಶ್ ಶೆಡ್ಗೆ ಹಾಗೂ ವೈಭವ್ ಸೂರ್ಯವಂಶಿ ಜೊತೆಗೂಡಿ 6 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 9 ರನ್ ಮಾತ್ರ. ಈ ಮೂಲಕ ಶ್ರೀಲಂಕಾ ತಂಡವು 7 ರನ್ಗಳ ಸೂಪರ್ ಜಯ ಸಾಧಿಸಿದೆ.
ಶ್ರೀಲಂಕಾ ಎ ಪ್ಲೇಯಿಂಗ್ 11: ನಿರೋಷನ್ ಡಿಕ್ವೆಲ್ಲಾ (ವಿಕೆಟ್ ಕೀಪರ್) , ಅವಿಷ್ಕಾ ಫೆರ್ನಾಂಡೊ , ವಿಷೇನ್ ಹಾಲಂಬಗೆ , ಸದೀರ ಸಮರವಿಕ್ರಮ , ಅಹಾನ್ ವಿಕ್ರಮಸಿಂಘೆ , ಸಹನ್ ಅರಚ್ಚಿಗೆ (ನಾಯಕ) , ವನುಜಾ ಸಹನ್ , ವಿಜಯಕಾಂತ್ ವಿಯಸ್ಕಾಂತ್ , ಕುಗಥಾಸ್ ಮಥುಲನ್ , ಮೊಹಮ್ಮದ್ ಶಿರಾಜ್ , ಚಾಮಿಕಾ ಗುಣಶೇಖರ.
ಭಾರತ ಎ ಪ್ಲೇಯಿಂಗ್ 11: ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್ ), ವೈಭವ್ ಸೂರ್ಯವಂಶಿ , ರುತುರಾಜ್ ಗಾಯಕ್ವಾಡ್ , ತಿಲಕ್ ವರ್ಮಾ (ನಾಯಕ) , ಆಯುಷ್ ಬದೋನಿ , ಸೂರ್ಯಾಂಶ್ ಶೆಡ್ಗೆ , ನಿಶಾಂತ್ ಸಿಂಧು , ಅನುಕೂಲ್ ರಾಯ್ , ಅರ್ಷದ್ ಖಾನ್ , ವಿಪ್ರಾಜ್ ನಿಗಮ್ , ಯಶ್ ಠಾಕೂರ್.
