ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್

Updated on: Feb 03, 2026 | 11:53 AM

Sri Lanka vs England, 2nd T20I: 190 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡದ ಇನಿಂಗ್ಸ್​​ಗೆ ಮಳೆ ಅಡ್ಡಿಯಾಯಿತು. ಹೀಗಾಗಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ 17 ಓವರ್​ಗಳಲ್ಲಿ 168 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 16.4 ಓವರ್​ಗಳಲ್ಲಿ 173 ರನ್​ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಪಲ್ಲೆಕೆಲ್ಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿದ್ದರು.

190 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡದ ಇನಿಂಗ್ಸ್​​ಗೆ ಮಳೆ ಅಡ್ಡಿಯಾಯಿತು. ಹೀಗಾಗಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ 17 ಓವರ್​ಗಳಲ್ಲಿ 168 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 16.4 ಓವರ್​ಗಳಲ್ಲಿ 173 ರನ್​ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಮೂರು ಪಂದ್ಯದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಇಂಗ್ಲೆಂಡ್ ತಂಡವು ಶ್ರೀಲಂಕಾ ವಿರುದ್ಧದ ಸತತ 10 ಟಿ20 ಪಂದ್ಯಗಳನ್ನು ಗೆದ್ದ ಸಾಧನೆಯನ್ನು ಸಹ ಮಾಡಿದೆ.

 

Loading...
Unable to load recommendations.
Follow Us
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More