Video: ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಬೈಕ್ ಸ್ಟಾರ್ಟ್ ಆಗದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಖದೀಮ!
ವೆಣ್ಣಪ್ಪುವಾದ ತಂಬರವಿಲ ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಯುವತಿಯ ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ದುಷ್ಕರ್ಮಿ ಸಿಕ್ಕಿಬಿದ್ದಿದ್ದಾನೆ. ಯುವತಿ ಬಿದ್ದಾಗ ಸರ ಕದ್ದು ಹೋಗಲು ಪ್ರಯತ್ನಿಸಿದ್ದ ಆರೋಪಿಯ ಬೈಕ್ ಸ್ಟಾರ್ಟ್ ಆಗದ ಕಾರಣ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.
ವೆಣ್ಣಪ್ಪುವಾ (ಶ್ರೀಲಂಕಾ): ವೆಣ್ಣಪ್ಪುವಾದ ತಂಬರವಿಲ ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವತಿಯನ್ನು ತಡೆದು, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ ಘಟನೆಯೊಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.
ಯುವತಿಯ ಹಿಂದಿನಿಂದಲೇ ಮತ್ತೊಂದು ಬೈಕ್‌ನಲ್ಲಿ ಬಂದ ದುಷ್ಕರ್ಮಿ ಆಕೆಯ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿಯ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಬಿದ್ದ ಅವಕಾಶವನ್ನು ಬಳಸಿಕೊಂಡ ಆರೋಪಿಯು ಯುವತಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಈ ವೇಳೆ ಆತನ ಬೈಕ್ ಸ್ಟಾರ್ಟ್ ಕಾರಣ, ಸ್ಥಳದಲ್ಲಿದ್ದವರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

