ಶ್ರೀಲಂಕಾ ಅಧ್ಯಕ್ಷರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ

ಶ್ರೀಲಂಕಾ ಅಧ್ಯಕ್ಷರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ

ಸುಷ್ಮಾ ಚಕ್ರೆ
|

Updated on: Dec 16, 2024 | 3:45 PM

ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರಿಗೆ ಇಂದು ಬೆಳಗ್ಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಮತ್ತು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ಡಿಸಾನಾಯಕೆ ಅವರು ತಮ್ಮ ಸಚಿವರು, ರಾಜತಾಂತ್ರಿಕರು ಮತ್ತು ಅಧಿಕಾರಿಗಳಿಗೆ ಪರಸ್ಪರ ಪರಿಚಯಿಸಿಕೊಂಡರು. ಶ್ರೀಲಂಕಾ ಅಧ್ಯಕ್ಷರು ಡಿಸೆಂಬರ್ 15 ರಿಂದ ಡಿಸೆಂಬರ್ 17 ರವರೆಗೆ ಭಾರತ ಪ್ರವಾಸದಲ್ಲಿದ್ದಾರೆ. ಇದಕ್ಕೂ ಮುನ್ನ ಭಾನುವಾರ ದೆಹಲಿಯಲ್ಲಿ ಶ್ರೀಲಂಕಾ ಅಧ್ಯಕ್ಷರನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಮುರುಗನ್ ಬರಮಾಡಿಕೊಂಡರು.

ನವದೆಹಲಿ: ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರು ಭಾರತಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರವೇ ಭಾರತಕ್ಕೆ ಆಗಮಿಸಿರುವ ಅವರಿಗೆ ಇಂದು ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಸಾಂಪ್ರದಾಯಿಕ ಸ್ವಾಗತವನ್ನು ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು. ಶ್ರೀಲಂಕಾ ಅಧ್ಯಕ್ಷ ದಿಸಾನಾಯಕ ಅವರಿಗೆ ರಕ್ಷಣಾ ಪಡೆಗಳಿಂದ ಗಾರ್ಡ್ ಆಫ್ ಹಾನರ್ ಅನ್ನು ನೀಡಲಾಯಿತು. ಸೆಪ್ಟೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ದಿಸಾನಾಯಕೆ ಅವರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ