ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ

Updated on: Jun 16, 2026 | 1:05 PM

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಧರ್ಮಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ ಜಯಮ್ಮ ಅವರ ನಿಧನ ಇಡೀ ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಇಂದು ಬೆಳಗ್ಗೆ ಅನಾರೋಗ್ಯದ ಕಾರಣದಿಂದ ಜಯಮ್ಮ ಅವರು ಕೊನೆಯುಸಿರೆಳೆದಿದ್ದು, ಸ್ಯಾಂಡಲ್‌ವುಡ್‌ನ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ನಟ ಶ್ರೀಮುರುಳಿ ಹಾಗೂ ವಿಜಯ್ ರಾಘವೇಂದ್ರ ಅವರ ತಾಯಿ ಜಯಮ್ಮ ಇಂದು (ಜೂನ್ 16) ನಿಧನ ಹೊಂದಿದ್ದಾರೆ. ಸದಾ ಧೈರ್ಯದಿಂದ ಇರುತ್ತಿದ್ದ ‘ರೋರಿಂಗ್ ಸ್ಟಾರ್’ ಶ್ರೀಮುರುಳಿ ಅವರು ಅಮ್ಮನ ಪಾರ್ಥಿವ ಶರೀರವನ್ನು ನೋಡುತ್ತಿದ್ದಂತೆ ತಡೆಯಲಾರದೆ ಕಣ್ಣೀರಿಟ್ಟ ಘಟನೆ ಎಲ್ಲರನ್ನೂ ಭಾವುಕರನ್ನಾಗಿಸಿದೆ. ಯಾವಾಗಲೂ ಬೆಳ್ಳಿತೆರೆಯ ಮೇಲೆ ರಗಡ್ ಆಕ್ಷನ್ ಪಾತ್ರಗಳ ಮೂಲಕ ಅಬ್ಬರಿಸುವ ಶ್ರೀಮುರುಳಿ, ವೈಯಕ್ತಿಕ ಜೀವನದಲ್ಲಿ ತಾಯಿಗೆ ಅತಿಯಾಗಿ ಹತ್ತಿರವಾಗಿದ್ದರು. ತಮ್ಮ ಸಿನಿ ಜರ್ನಿ ಹಾಗೂ ವೈಯಕ್ತಿಕ ಬೆಳವಣಿಗೆಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತಿದ್ದ ಅಮ್ಮ ಇನ್ನು ನೆನಪು ಮಾತ್ರ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಜಯಮ್ಮ ಅವರ ಪಾರ್ಥಿವ ಶರೀರದ ಮುಂದೆ ಮೌನವಾಗಿ ಕಣ್ಣೀರು ಸುರಿಸುತ್ತಿದ್ದ ಶ್ರೀಮುರುಳಿ ಅವರನ್ನು ನೋಡಿ ಅಲ್ಲಿ ನೆರೆದಿದ್ದ ಬಂಧುಗಳು ಮತ್ತು ಚಿತ್ರರಂಗದ ಸ್ನೇಹಿತರು ಸಾಂತ್ವನ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More