‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ

Updated on: Jul 14, 2026 | 8:22 AM

ನಟ ಶ್ರೀಮುರಳಿ ಅವರು ಪರಾಕ್ ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಇದು ವಿಭಿನ್ನ ಕಥಾವಸ್ತುವನ್ನು ಹೊಂದಿರುವ ಕಂಟೆಂಟ್-ಡ್ರಿವನ್ ಸಿನಿಮಾ ಎಂದು ಹೇಳಿದರು. ಅಲ್ಲದೆ, ತಮ್ಮ ಚಿತ್ರತಂಡದ ಸದಸ್ಯರೊಬ್ಬರ ಪರವಾಗಿ ಮಾತು ಮುತ್ತು, ಮೌನ ಬಂಗಾರ ಎಂದು ಉಲ್ಲೇಖಿಸಿ ಕ್ಷಮೆಯಾಚಿಸಿದರು. ತಮ್ಮ ಪಾತ್ರದ ಕುರಿತು ಅಭಿಮಾನಿಗಳ ಕುತೂಹಲ ಹೆಚ್ಚಿಸಿದರು.

ನಟ ಶ್ರೀಮುರಳಿ ಅಭಿನಯದ ಬಹು ನಿರೀಕ್ಷಿತ ಪರಾಕ್ ಚಿತ್ರದ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಹಾಲೇಶ್ ಕೋಗುಂಡಿ ನಿರ್ದೇಶನದ ಈ ಚಿತ್ರವು ಕಮರ್ಷಿಯಲ್ ಅಂಶಗಳ ಜೊತೆಗೆ ವಿಭಿನ್ನ ಕಥಾವಸ್ತುವನ್ನು ಹೊಂದಿದೆ ಎಂದು ಶ್ರೀಮುರಳಿ ತಿಳಿಸಿದ್ದಾರೆ. ಇದು ಕಳೆದ ಎರಡೂವರೆ-ಮೂರು ವರ್ಷಗಳಿಂದ ಚರ್ಚೆಯಲ್ಲಿದ್ದ ಹೊಸ ಪರಿಕಲ್ಪನೆಯ ಸಿನಿಮಾ ಎಂದು ಅವರು ಹೇಳಿದರು. ಚಿತ್ರವು ಕಂಟೆಂಟ್-ಡ್ರಿವನ್ ಆಗಿದ್ದು, ಒಬ್ಬ ವ್ಯಕ್ತಿಯ ಹಿನ್ನೆಲೆ, ಘಟನೆಗಳು ಹಾಗೂ ನ್ಯಾಯದ ಕುರಿತು ಮಹತ್ವದ ವಿಚಾರಗಳನ್ನು ಒಳಗೊಂಡಿದೆ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More