ಮಂತ್ರಾಲಯದಲ್ಲಿ ಗುರು ರಾಯರ ಮಧ್ಯಾರಾಧನೆ ಸಂಭ್ರಮ; ಕಣ್ತುಂಬಿಕೊಂಡ ಭಕ್ತಗಣ
ಶ್ರೀಗುರು ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು, ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಕ್ತ ಸಾಗರವೇ ಹರಿದು ಬರ್ತಿದೆ. ಮಠದ ಪ್ರಾಕಾರದಲ್ಲಿ ಗಜ, ರಜತ, ಚಿನ್ನದ ರಥೋತ್ಸವ ನಡೆಸಲಾಯಿತು. ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ.
ರಾಯಚೂರು, ಆಗಸ್ಟ್.21: ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಗಳ (Sri Raghavendra Swamy Mutt) 353 ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ ಗುರು ರಾಯರ ಮಧ್ಯಾರಾಧನೆ ಸಂಭ್ರಮ ಮನೆ ಮಾಡಿದೆ. ಗುರು ರಾಯರು ವೃಂದಾವನಸ್ಥರಾಗಿ ಇಂದಿಗೆ 353 ವರ್ಷ ತುಂಬಿದೆ. ಬೆಳಗ್ಗೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು, ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಕ್ತ ಸಾಗರವೇ ಹರಿದು ಬರ್ತಿದೆ.
ವೃಂದಾವನಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ವಿಶೇಷ ಮಹಾಪಂಚಾಮೃತ ಅಭಿಷೇಕ ಮಾಡಿದರು. ಸ್ವರ್ಣ ಕವಚ ರಾಯರ ವೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ಮಠದ ಪ್ರಾಕಾರದಲ್ಲಿ ಗಜ, ರಜತ, ಚಿನ್ನದ ರಥೋತ್ಸವ ನಡೆಸಲಾಯಿತು. ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos