AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳಕು: ನಟನ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳಕು: ನಟನ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ

ಸಹದೇವ್​ ಮಾನೆ
| Edited By: |

Updated on: Jun 12, 2026 | 4:02 PM

Share

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರು ಕೇಳಿಬಂದಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪ್ರಕಾಶ್ ರಾಜ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಧರ್ಮದ್ರೋಹಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಬೆಳಗಾವಿ, ಜೂನ್​​ 12: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್​​ಗೆ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರು ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ, ಬೆಳಗಾವಿಯಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ಪ್ರಕಾಶ್ ರಾಜ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲಾಗಿದೆ. ಪ್ರತಿಭಟನಾಕಾರರು ಧರ್ಮದ್ರೋಹಿ ಪ್ರಕಾಶ್ ರಾಜ್ ಎಂಬ ಘೋಷಣೆಗಳನ್ನೂ ಕೂಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More