AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಶ್ರೀ ಶ್ರೀ ರವಿಶಂಕರ್ ಗುರೂಜಿ

ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಶ್ರೀ ಶ್ರೀ ರವಿಶಂಕರ್ ಗುರೂಜಿ

ಗಣಪತಿ ಶರ್ಮಾ
|

Updated on: May 10, 2026 | 1:24 PM

Share

ಬೆಂಗಳೂರಿನ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭವ್ಯ ಧ್ಯಾನ ಮಂದಿರವನ್ನು ಉದ್ಘಾಟಿಸಿದರು. ಈ ಐತಿಹಾಸಿಕ ಕ್ಷಣದ ನೆನಪಿಗಾಗಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ಮೋದಿಯವರಿಗೆ ಆಶ್ರಮದ ಸುಂದರ ಭಾವಚಿತ್ರವನ್ನು ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಿದರು.

ಬೆಂಗಳೂರು, ಮೇ 10: ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಕಾರ್ಯಕ್ರಮ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ಕಮಲದ ಹೂವಿನ ಆಕೃತಿಯಲ್ಲಿ ನಿರ್ಮಾಣ ಮಾಡಲಾಗಿರುವ ಭವ್ಯವಾದ ‘ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More