ಹುಬ್ಬಳ್ಳಿಯಲ್ಲಿ ಶ್ರೀಕಾಂತ್​ ಪೂಜಾರಿ ಬಂಧನ; ಖಡಕ್ ಎಚ್ಚರಿಕೆ ಕೊಟ್ಟ ಮುತಾಲಿಕ್‌; ಇಲ್ಲಿದೆ ವಿಡಿಯೋ

Edited By:

Updated on: Jan 03, 2024 | 7:20 PM

ಹುಬ್ಬಳ್ಳಿ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ವಿಚಾರ ‘ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್​ ಮುತಾಲಿಕ್(Pramod Muthalik) ಕಿಡಿ ಕಾರಿದ್ದಾರೆ. 30 ವರ್ಷ ನಿದ್ರೆ ಮಾಡುತ್ತಿದ್ರಾ ಅಥವಾ ಕತ್ತೆ ಕಾಯುತ್ತಿದ್ದರಾ?, ನೀವು 2 ಬಾರಿ CM ಆಗಿದ್ದಿರಲ್ಲ, ಆಗ ಯೋಚನೆ ಮಾಡ್ಬೇಕಿತ್ತಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಗದಗ, ಜ.03: ಹುಬ್ಬಳ್ಳಿ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ವಿಚಾರ ‘ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್​ ಮುತಾಲಿಕ್(Pramod Muthalik) ಕಿಡಿ ಕಾರಿದ್ದಾರೆ. 30 ವರ್ಷ ನಿದ್ರೆ ಮಾಡುತ್ತಿದ್ರಾ ಅಥವಾ ಕತ್ತೆ ಕಾಯುತ್ತಿದ್ದರಾ?, ನೀವು 2 ಬಾರಿ CM ಆಗಿದ್ದಿರಲ್ಲ, ಆಗ ಯೋಚನೆ ಮಾಡ್ಬೇಕಿತ್ತಲ್ಲ. ಈಗ ಮಂದಿರ ಉದ್ಘಾಟನೆ ಮಾಡುತ್ತಿರುವ ಸಂದರ್ಭದಲ್ಲಿಯೇ ಏಕೆ?, ಕಾಂಗ್ರೆಸ್​ನವರು ಹಿಂದೂ ದ್ರೋಹಿ ಕೆಲಸ ಮಾಡುತ್ತಿದ್ದು, ಮುಸ್ಲಿಮರ ಓಲೈಕೆಗೆ ಮುಂದಾಗಿದ್ದಾರೆ. ಈ ಮೂಲಕ ಮುಸ್ಲಿಂ ಮತಗಳಿಗಾಗಿ ಬಾಬರ್​​ನ ಪರ ನಿಂತುಕೊಂಡಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನೊಬ್ಬ ಯಾರನ್ನಾದರೂ ಅರೆಸ್ಟ್​ ಮಾಡಿದರೆ, ಕರ್ನಾಟಕ ಹೊತ್ತಿ ಉರಿಯುತ್ತದೆ ಎಂಬಂತಹ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Jan 03, 2024 07:19 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More