Video: ಶ್ರೀನಗರದ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ವ್ಯಕ್ತಿಯಿಂದ ಏಕಾಏಕಿ ಹಲ್ಲೆ

Updated on: Jul 25, 2025 | 8:15 AM

ಶ್ರೀನಗರದ ಎಸ್​ಎಂಎಚ್​ಎಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರೊಬ್ಬರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ವಿಡಿಯೋದಲ್ಲಿ ಆ ವ್ಯಕ್ತಿ ವೈದ್ಯರಿದ್ದಲ್ಲಿಗೆ ಬಂದು ರೋಗಿಯ ಕುಟುಂಬದವರೊಂದಿಗೆ ಮಾತನಾಡುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ. ಆದರೆ ಹಲ್ಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಎರಡು ವಾರಗಳ ಹಿಂದೆ, ದೆಹಲಿಯ ಜಿಟಿಬಿ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರ ಮೇಲೆ ಮೂವರು ಅಪರಿಚಿತರು ಹಲ್ಲೆ ನಡೆಸಿದ್ದರು.

ಶ್ರೀನಗರ, ಜುಲೈ 25: ಶ್ರೀನಗರದ ಎಸ್​ಎಂಎಚ್​ಎಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರೊಬ್ಬರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ವಿಡಿಯೋದಲ್ಲಿ ಆ ವ್ಯಕ್ತಿ ವೈದ್ಯರಿದ್ದಲ್ಲಿಗೆ ಬಂದು ರೋಗಿಯ ಕುಟುಂಬದವರೊಂದಿಗೆ ಮಾತನಾಡುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ. ಆದರೆ ಹಲ್ಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಎರಡು ವಾರಗಳ ಹಿಂದೆ, ದೆಹಲಿಯ ಜಿಟಿಬಿ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರ ಮೇಲೆ ಮೂವರು ಅಪರಿಚಿತರು ಹಲ್ಲೆ ನಡೆಸಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More