‘ಸತ್ಯಕ್ಕೆ ಜಯವಾಗಿದೆ’: ಮರು ಮತ ಎಣಿಕೆಯಲ್ಲಿ ಗೆಲುವು ಬೆನ್ನಲ್ಲೇ ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು

Edited By:

Updated on: May 02, 2026 | 5:49 PM

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ ನಂತರವೂ ಶಾಸಕ ಟಿ.ಡಿ. ರಾಜೇಗೌಡರ ಗೆಲುವು ಮತ್ತೊಮ್ಮೆ ದೃಢಪಟ್ಟಿದೆ. ಅವರ ವಿರುದ್ಧದ ಹಲವು ಆರೋಪಗಳನ್ನು ನ್ಯಾಯಾಲಯವು ತಿರಸ್ಕರಿಸಿ, ಕೇವಲ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿರುವುದನ್ನು ಅವರು ಖಚಿತಪಡಿಸಿದ್ದಾರೆ. ಈ ಗೆಲುವನ್ನು ಅವರ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ ನನಗೆ ಗೆಲುವಾಗಿದೆ, ನನ್ನ ಕಾರ್ಯಕರ್ತರು ಸಂಭ್ರಮ ಪಡುವಂತಾಗಿದೆ. ನನ್ನ ವಿರುದ್ಧ ನಿರಂತರವಾಗಿ ಆರೋಪ ಮಾಡುತ್ತಿದ್ದರು. ಆದರೆ ಸತ್ಯಕ್ಕೆ ಜಯವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More