ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆರೋಪ: ಎಫ್​ಎಸ್​ಎಲ್​ನಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದ ಪರಮೇಶ್ವರ್

Updated on: May 12, 2026 | 11:22 AM

ಶೃಂಗೇರಿ ಎಂಎಲ್ಎ ಸ್ಥಾನಕ್ಕೆ ಸಂಬಂಧಿಸಿದಂತೆ ಮರುಎಣಿಕೆ, ಸುಪ್ರೀಂ ಕೋರ್ಟ್ ಆದೇಶ ಮತ್ತು ಟ್ಯಾಂಪರಿಂಗ್ ಆರೋಪಗಳ ಕುರಿತು ಚರ್ಚೆ ನಡೆಯುತ್ತಿದೆ. ಆರಂಭಿಕ ಮರುಎಣಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ, ಸುಪ್ರೀಂ ಕೋರ್ಟ್ ಹಿಂದಿನ ಕೌಂಟಿಂಗ್ ಸರಿಯಾಗಿದೆ ಎಂದು ತೀರ್ಮಾನಿಸಿದೆ. ಸದ್ಯ, ಟ್ಯಾಂಪರಿಂಗ್ ಆರೋಪಗಳ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ.

ಬೆಂಗಳೂರು, ಮೇ 12: ಶೃಂಗೇರಿ ಎಂಎಲ್ಎ ಸ್ಥಾನದ ಗೊಂದಲದ ಬಗ್ಗೆ ಹಾಗೂ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ವೋಟ್ ಟ್ಯಾಂಪರಿಂಗ್ ಆರೋಪ ಸಂಬಂಧ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿದ ನಂತರ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ. ಟ್ಯಾಂಪರಿಂಗ್ ಆರೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ದೂರು ದಾಖಲಿಸಿಕೊಂಡು ಎಫ್ಐಆರ್ ನೊಂದಾಯಿಸಲಾಗಿದೆ. ರಾಜ್ಯ ಪೊಲೀಸರು ಈ ಟ್ಯಾಂಪರಿಂಗ್ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎಫ್ಎಸ್ಎಲ್ (Forensic Science Laboratory) ಸಹಾಯ ಪಡೆಯಲಾಗುತ್ತಿದ್ದು, ಇದು ಕೌಂಟಿಂಗ್ ಪ್ರಕ್ರಿಯೆಯ ಒಂದು ಭಾಗವಾಗಿಯೂ ಪರಿಶೀಲನೆಗೆ ಒಳಪಡಲಿದೆ. ಕಾನೂನು ಪ್ರಕಾರ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More