‘ಮತ್ತಷ್ಟು ಮೇಲಕ್ಕೆ ಎರುತ್ತೀರಿ’; ನಟಿ ಶ್ರೀನಿಧಿ ಶೆಟ್ಟಿಗೆ ಸಿಕ್ತು ದೈವದ ಅಭಯ
ಮಂಗಳೂರಿನ ಹೊರವಲಯದಲ್ಲಿರೋ ಕಿನ್ನಿಗೋಳಿಯ ತಾಳಿಪಾಡಿ ಗುತ್ತುವಿನಲ್ಲಿ ಈ ಹರಕೆ ನೇಮೋತ್ಸವ ನಡೆದಿದೆ. ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಸಲಾಯಿತು. ಇದರಲ್ಲಿ ಶ್ರೀನಿಧಿ ಶೆಟ್ಟಿ ಹಾಗೂ ಅವರ ಕುಟುಂಬದವರು, ಸಂಬಂಧಿಕರು ಪಾಲ್ಗೊಂಡರು.
ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ‘ಕೆಜಿಎಫ್’ ಸಿನಿಮಾದಲ್ಲಿ ನಟಿಸಿ ಫೇಮಸ್ ಆದವರು. ಅವರ ಹುಟ್ಟೂರು ಮಂಗಳೂರು. ಅವರು ಹಾಗೂ ಅವರ ಕುಟುಂಬ ದೈವಗಳಿಗೆ ಹೆಚ್ಚು ನಡೆದುಕೊಳ್ಳುತ್ತದೆ. ಹೀಗಾಗಿ ಅವರು ತಮ್ಮ ಕುಟುಂಬದ ದೈವಗಳಿಗೆ ಹೇಳಿಕೊಂಡಿದ್ದ ಹರಕೆಯನ್ನು ತೀರಿಸಿದ್ದಾರೆ. ಮಂಗಳೂರಿನ ಹೊರವಲಯದಲ್ಲಿರೋ ಕಿನ್ನಿಗೋಳಿಯ ತಾಳಿಪಾಡಿ ಗುತ್ತುವಿನಲ್ಲಿ ಈ ಹರಕೆ ನೇಮೋತ್ಸವ ನಡೆದಿದೆ. ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಸಲಾಯಿತು. ಇದರಲ್ಲಿ ಶ್ರೀನಿಧಿ ಶೆಟ್ಟಿ ಹಾಗೂ ಅವರ ಕುಟುಂಬದವರು, ಸಂಬಂಧಿಕರು ಪಾಲ್ಗೊಂಡರು. ತಮ್ಮ ಯಶಸ್ಸಿನ ಹಿಂದೆ ಕುಟುಂಬದ ದೈವಗಳ ಆಶೀರ್ವಾದ ಇದ್ದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಈ ಹರಕೆ ಹೇಳಿಕೊಂಡಿದ್ದರು ಶ್ರೀನಿಧಿ. ‘ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀರಿ’ ಎಂದು ದೈವಗಳು ಇದೇ ಸಂದರ್ಭ ಶ್ರೀನಿಧಿ ಶೆಟ್ಟಿಗೆ ಅಭಯ ನೀಡಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos