ಶ್ರೀರಾಮುಲು ಒಳ್ಳೆಯ ವ್ಯಕ್ತಿ ಮತ್ತು ಆತ್ಮೀಯ ಸ್ನೇಹಿತ, ಕಾಂಗ್ರೆಸ್​ಗೆ ಬಂದರೆ ಸ್ವಾಗತ: ಸಂತೋಷ್ ಲಾಡ್

ಅರುಣ್​ ಕುಮಾರ್​ ಬೆಳ್ಳಿ

Updated on: Jan 28, 2025 | 3:02 PM

ಕಾಂಗ್ರೆಸ್ ಪಕ್ಷವನ್ನು ಸಿಟಿ ಬಸ್ ಮತ್ತು ಡಬಲ್ ಡೆಕ್ಕರ್ ಗೆ ಹೋಲಿಸುವ ಸಚಿವ ಸಂತೋಷ್ ಲಾಡ್, ಇವುಗಳಿಗೆ ಬಾಗಿಲು ಇರೋದಿಲ್ಲ ಮತ್ತು ಎಲ್ಲ ಸ್ಟಾಪ್​ಗಳಲ್ಲಿ ನಿಲ್ಲುತ್ತವೆ, ಯಾರು ಬೇಕಾದರೂ ಹತ್ತಬಹುದು ಯಾರು ಬೇಕಾದರೂ ಇಳಿಯಬಹುದು ಎಂದು ಹೇಳಿದರು. ಶ್ರೀರಾಮುಲು ಮತ್ತು ಜನಾರ್ಧನರೆಡ್ಡಿ ಮಧ್ಯೆ ಜಗಳ ಶುರುವಾಗಿದ್ದಕ್ಕೆ ಏನೆಲ್ಲ ಉಪಕತೆಗಳು ಹುಟ್ಟಿಕೊಳ್ಳುತ್ತಿವೆ.

ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಮೊನ್ನೆಯಷ್ಟೇ ಬಿಜೆಪಿಗೆ ರೀ ಎಂಟ್ರಿ ಪಡೆದ ಗಾಲಿ ಜನಾನರ್ಧನ ರೆಡ್ಡಿ ವಿರುದ್ದ ಸಮರ ಸಾರಿರುವ ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ನಡುವೆ ಭಾರೀ ಸ್ನೇಹವಿದೆ. ರೆಡ್ಡಿ ಜೊತೆ ಜಗಳದ ಹಿನ್ನೆಲೆಯಲ್ಲಿ ಶ್ರೀರಾಮುಲು ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗಳು ಹರಿದಾಡುತ್ತಿವೆ. ಇದೇ ಹಿನ್ನೆಲೆಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಲಾಡ್, ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ, ಅವರು ನನ್ನ ಅತ್ಯಂತ ಆಪ್ತ ಸ್ನೇಹಿತ ಮತ್ತು ಬಹಳ ವಿನಮ್ರ ವ್ಯಕ್ತಿ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಶ್ರೀರಾಮುಲು ಜೊತೆಗೆ 50 ಶಾಸಕರನ್ನು ಸಂಪರ್ಕಿಸಿದ್ದೆ; ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.