ಕೈ ಶಾಸಕನ ಎಡವಟ್ಟು: ಆಸ್ಪತ್ರೆಯಲ್ಲಿಯೇ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್

Edited By:

Updated on: Aug 21, 2026 | 4:25 PM

ಶ್ರೀರಂಗಪಟ್ಟಣ ಕೈ ಶಾಸಕ ರಮೇಶ್ ಬಂಡಿಸಿದ್ದೇಗೌಡ ಎಡವಟ್ಟು ಮಾಡಿಕೊಂಡಿದ್ದಾರೆ. ತಾಯಿ ಬರ್ತಡೇ ಕಾರ್ಯಕ್ರಮದ ನೆಪದಲ್ಲಿ ಸರ್ಕಾರಿ ಆಸ್ಪತ್ರೆಯನ್ನೇ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿವೆ. ಹೌದು..ತಾಯಿ ಬರ್ತಡೇ ಕಾರ್ಯಕ್ರಮದ ನೆಪದಲ್ಲಿ ಶಾಸಕರಿಂದ ಸಾಂಸ್ಕೃತಿಕ ಕಾರ್ಯಕ್ರಮ, ನಾಟಕ ಆಯೋಜನೆ ಮಾಡಿದ್ದಾರೆ. ಆದ್ರೆ, ಲೇಡಿ ಪಾತ್ರಾಧಾರಿಗಳಿಗೆ ಆಸ್ಪತ್ರೆಯೇ ಮೇಕಪ್ ಕೊಠಡಿ ಆಗಿದ್ದು, ಆಸ್ಪತ್ರೆಯಲ್ಲಿಯೇ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್ ಮಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಂಡ್ಯ, (ಆಗಸ್ಟ್ 21): ಶ್ರೀರಂಗಪಟ್ಟಣ ಕೈ ಶಾಸಕ ರಮೇಶ್ ಬಂಡಿಸಿದ್ದೇಗೌಡ ಎಡವಟ್ಟು ಮಾಡಿಕೊಂಡಿದ್ದಾರೆ. ತಾಯಿ ಬರ್ತಡೇ ಕಾರ್ಯಕ್ರಮದ ನೆಪದಲ್ಲಿ ಅರಕೆರೆ ಸರ್ಕಾರಿ ಆಸ್ಪತ್ರೆಯನ್ನೇ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿವೆ. ಹೌದು..ತಾಯಿ ಬರ್ತಡೇ ಕಾರ್ಯಕ್ರಮದ ನೆಪದಲ್ಲಿ ಶಾಸಕರಿಂದ ಸಾಂಸ್ಕೃತಿಕ ಕಾರ್ಯಕ್ರಮ, ನಾಟಕ ಆಯೋಜನೆ ಮಾಡಿದ್ದಾರೆ. ಆದ್ರೆ, ಲೇಡಿ ಪಾತ್ರಾಧಾರಿಗಳಿಗೆ ಆಸ್ಪತ್ರೆಯೇ ಮೇಕಪ್ ಕೊಠಡಿ ಆಗಿದ್ದು, ಆಸ್ಪತ್ರೆಯಲ್ಲಿಯೇ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್ ಮಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಾಟಕ ಕಲಾವದೆಯೊಬ್ಬರು ಹಾಸ್ಪಿಟಲ್ ನಲ್ಲಿ ಸೊಂಟ ಬಳುಕಿಸಿ ರೀಲ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.ಶಾಸಕನ ವಯಕ್ತಿಕ ಕಾರ್ಯಕ್ರಮಕ್ಕೆ ಆಸ್ಪತ್ರೆ ಕೊಠಡಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಆಕ್ಷೇಪಗಳು ವ್ಯಕ್ತವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಕಿಕ್ ಮಾಡಿ

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More