ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ನಟ ರವಿಚಂದ್ರನ್ ಉದ್ಘಾಟನೆ, ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
ಶ್ರೀರಂಗಪಟ್ಟಣ ದಸರಾಕ್ಕೆ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು. ನಟ ನಿರ್ದೇಶಕ ಕ್ರೇಜಿ ಸ್ಟಾರ್ ರವಿಚಂದ್ರನ್ ದಸರಾ ಉದ್ಘಾಟಿಸಿದರು. ಕ್ಯಾಪ್ಟನ್ ಧನಂಜಯ ಆನೆ ಅಂಬಾರಿಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಿದನು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಮಂಡ್ಯ: ಶ್ರೀರಂಗಪಟ್ಟಣದಲ್ಲಿ ವೈಭವದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಉತ್ಸವವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು. ಖ್ಯಾತ ನಟ ಮತ್ತು ನಿರ್ದೇಶಕ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ದಸರಾ ಆಚರಣೆಗಳಿಗೆ ಚಾಲನೆ ನೀಡಿದರು. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಯು ಶ್ರೀರಂಗಪಟ್ಟಣದ ಕಿರಂಗೂರು ಬಳಿಯ ಬನ್ನಿಮಂಟಪದಿಂದ ಆರಂಭವಾಯಿತು. ಭವ್ಯ ಮೆರವಣಿಗೆಯು ಬಾಬುರಾಯಬಕೊಪ್ಪಲು ಮತ್ತು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಸಾಗಿ, ಶ್ರೀರಂಗಪಟ್ಟಣದ ಪೇಟೆ ಬೀದಿ ಮೂಲಕ ಸಾಗಿತು. ಈ ಬಾರಿ ಕ್ಯಾಪ್ಟನ್ ಧನಂಜಯ ಎಂಬ ಆನೆಯು ಮರದ ಅಂಬಾರಿಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಹೊತ್ತು ಹೆಮ್ಮೆಯಿಂದ ಹೆಜ್ಜೆ ಹಾಕಿದನು. ಕುಮ್ಕಿ ಆನೆಗಳಾದ ರೂಪ ಮತ್ತು ಲಕ್ಷ್ಮಿ ಸಹ ಧನಂಜಯನಿಗೆ ಸಾಥ್ ನೀಡಿದವು. ಈ ಮೆರವಣಿಗೆಯು ಕಿರಂಗೂರು ಬನ್ನಿಮಂಟಪದಿಂದ ರಂಗನಾಥಸ್ವಾಮಿ ದೇವಾಲಯದ ವರೆಗೆ ಸಾಗಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

