ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Davanagere South By Election) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ಗೆ (Congress) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ಗೆ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್ಗೆ ಆನೆಬಲ ಬಂದಂತಾಗಿದೆ.
ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Davanagere South By Election) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ಗೆ (Congress) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ಗೆ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್ಗೆ ಆನೆಬಲ ಬಂದಂತಾಗಿದೆ.
ಹಾವೇರಿಯ ರಾಣೇಬೆನ್ನೂರು ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ಮಾತನಾಡಿರುವ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ, ಸಮಾಜದ ಯಾವುದೇ ವ್ಯಕ್ತಿ ಯಾವುದೇ ಪಕ್ಷದಿಂದ ಸ್ಪರ್ಧಿಸಲಿ. ಸಮಾಜದವರೆಲ್ಲರೂ ಬೆಂಬಲಿಸೋದು ಅವರ ಆದ್ಯ ಕರ್ತವ್ಯ. ಶಾಮನೂರು ಶಿವಶಂಕರಪ್ಪ ಸಮಾಜದ ಒಗ್ಗಟ್ಟಿಗೆ ಶ್ರಮಿಸಿದ್ದಾರೆ. ಅಖಿಲ ಭಾರತ ವೀರಶೈವಸಂಘವನ್ನು ಸುಧೀರ್ಘವಾಗಿ ಮುನ್ನಡೆಸಿದ್ದಾರೆ. ಅವರ ಮೊಮ್ಮಗ ಈಗ ಚುನಾವಣಾ ಎದುರಿಸ್ತಿದ್ದಾರೆ. ಅವರಿಗೆ ಬೆಂಬಲಿಸಬೇಕು ಅಂತೇಳಿ ಸಮಾಜದವರಿಗೆ ಹೇಳಲು ಬಯಸ್ತೀನಿ ಎಂದು ಕರೆ ನೀಡಿದರು.
ಇದನ್ನೂ ನೋಡಿ: ದಾವಣಗೆರೆಯಲ್ಲಿ ತಣ್ಣಗಾಗದ ಅಸಮಾಧಾನ, ಅಖಾಡದಲ್ಲೇ ಉಳಿದ ಪೈಲ್ವಾನ್, ಕಾಂಗ್ರೆಸ್ಗೆ ಟೆನ್ಷನ್
Published on: Mar 26, 2026 10:20 PM
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!

