ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಪ್ರಾಮಾಣಿಕ ಮಾತು
ನಟ, ನಿರೂಪಕ ಸೃಜನ್ ಲೋಕೇಶ್ ಅವರು ‘ಜಿಎಸ್ಟಿ’ ಸಿನಿಮಾಗೆ ನಿರ್ದೇಶನ ಮಾಡಿ, ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಪ್ರಮಾಣಿಕವಾಗಿ ಮಾತನಾಡಿದರು. ತಾವು ನಿರ್ದೇಶಕ ಆಗಿದ್ದು ಯಾಕೆ ಎಂಬುದನ್ನು ಕೂಡ ಅವರು ವಿವರಿಸಿದರು. ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ ನೋಡಿ..
ನಟ, ನಿರೂಪಕ ಸೃಜನ್ ಲೋಕೇಶ್ ಅವರು ‘ಜಿಎಸ್ಟಿ’ (GST) ಸಿನಿಮಾಗೆ ನಿರ್ದೇಶನ ಮಾಡಿ, ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಪ್ರಮಾಣಿಕವಾಗಿ ಮಾತನಾಡಿದರು. ‘ಪ್ರಾಮಾಣಿಕವಾಗಿ ಹೇಳಬೇಕು ಎಂದರೆ ಇದು ನನ್ನ ಕನಸಿನಲ್ಲಿ ಬಂದ ಕಥೆ. ನನ್ನ ಸಿನಿಮಾ ಬಗ್ಗೆ ನಾನು ಮಾತನಾಡುವುದು ತಪ್ಪಾಗುತ್ತದೆ. ಜನರು ನೋಡಿ ಅಭಿಪ್ರಾಯ ತಿಳಿಸಬೇಕು. ಅತಿ ಆತ್ಮವಿಶ್ವಾಸದಿಂದ ಎಲ್ಲರೂ ಹೇಳಿಕೊಳ್ಳುತ್ತಾರೆ. 650ಕ್ಕೂ ಹೆಚ್ಚು ಸಿನಿಮಾ ನಾನು ಪ್ರಚಾರ ಮಾಡಿದ್ದೇನೆ. ಯಾರಿಗೂ ಗೊತ್ತಿಲ್ಲದೇ ಇರುವ ಸಿನಿಮಾ ಲ್ಯಾಂಡ್ ಮಾರ್ಕ್ ಆಗಿದೆ. ಭಾರಿ ನಿರೀಕ್ಷೆ ಇದ್ದ ಸಿನಿಮಾಗಳು ಸಾಧಾರಣ ಆಗಿದ್ದನ್ನು ನೋಡಿದ್ದೇನೆ. ನನ್ನ ಸಿನಿಮಾ ಅತ್ಯುತ್ತಮ, ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ. ಪ್ರಮಾಣಿಕವಾಗಿ, ನಿಷ್ಠೆಯಿಂದ ಒಂದು ಸಿನಿಮಾ ಮಾಡಿದ್ದೇನೆ. ಜನರು ನೋಡಿ ನಗಬೇಕು ಎಂಬ ಉದ್ದೇಶದಿಂದ ಸಿನಿಮಾ ಮಾಡಿದ್ದೇನೆ’ ಎಂದು ಸೃಜನ್ ಲೋಕೇಶ್ (Srujan Lokesh) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ನಗರಸಭೆ ಪೌರಾಯುಕ್ತೆಗೆ ನಿಂದನೆ: ರಾಜೀವ್ ಗೌಡ ಪರ ಮುನಿಯಪ್ಪ ಬ್ಯಾಟಿಂಗ್
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದ ಪ್ರತಾಪ್

