Kabzaa Song: ‘ಕಬ್ಜ’ ಲಿರಿಕಲ್ ಸಾಂಗ್ ಬಿಡುಗಡೆಗೆ ರಾಜಮೌಳಿ ಅತಿಥಿ? ಹೈದರಾಬಾದ್ನಲ್ಲಿ ಸದ್ದು ಮಾಡಲಿದೆ ಉಪ್ಪಿ ಚಿತ್ರ
R Chandru | Kabzaa Kannada Movie: ಫೆಬ್ರವರಿ 4ರಂದು ಹೈದರಾಬಾದ್ನಲ್ಲಿ ‘ಕಬ್ಜ’ ಸಿನಿಮಾದ ಅದ್ದೂರಿ ಇವೆಂಟ್ ನಡೆಯಲಿದೆ. ಅದಕ್ಕೆ ಟಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಆಗಮಿಸಲಿದ್ದಾರೆ.
ಆರ್. ಚಂದ್ರು ನಿರ್ದೇಶನ ಮಾಡಿರುವ ‘ಕಬ್ಜ’ ಸಿನಿಮಾ (Kabzaa Movie) ಮಾರ್ಚ್ 17ರಂದು ಬಿಡುಗಡೆ ಆಗಲಿದೆ. ಈಗ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಲು ಸಕಲ ತಯಾರಿ ನಡೆದಿದೆ. ಈ ಸಿನಿಮಾದ ಮೊದಲ ಲಿರಿಕಲ್ ಸಾಂಗ್ ಹೈದರಾಬಾದ್ನಲ್ಲಿ ಬಿಡುಗಡೆ ಆಗಲಿದೆ. ‘ಕಬ್ಜ’ ಪ್ಯಾನ್ ಇಂಡಿಯಾ ಸಿನಿಮಾ ಆದ್ದರಿಂದ ದೇಶದ ಪ್ರಮುಖ ನಗರಗಳಲ್ಲಿ ಒಂದೊಂದು ಸಾಂಗ್ ಬಿಡುಗಡೆ ಮಾಡಲು ಪ್ಲ್ಯಾನ್ ಸಿದ್ಧವಾಗಿದೆ. ತೆಲುಗು ನೆಲದಲ್ಲಿ ಉಪೇಂದ್ರ (Upendra) ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಹೈದರಾಬಾದ್ನಲ್ಲಿ ಫೆ.4ರಂದು ನಡೆಯಲಿರುವ ಲಿರಿಕಲ್ ಸಾಂಗ್ ಬಿಡುಗಡೆ ಕಾರ್ಯಕ್ರಮಕ್ಕೆ ಎಸ್ಎಸ್ ರಾಜಮೌಳಿ, ‘ಮೆಗಾಸ್ಟಾರ್’ ಚಿರಂಜೀವಿ ಸೇರಿದಂತೆ ಅನೇಕ ಘಟಾನುಘಟಿಗಳು ಹಾಜರಿ ಹಾಕುವ ನಿರೀಕ್ಷೆ ಇದೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಆರ್. ಚಂದ್ರು (R Chandru) ಮಾತನಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos