SSLC ಪರೀಕ್ಷೆ: ಹಿಂದಿ ಭಾಷೆಗೆ ಸಿಗುತ್ತಾ ಗ್ರೇಸ್ ಮಾರ್ಕ್ಸ್? ಖಾಸಗಿ ಶಾಲೆಗಳ ಒಕ್ಕೂಟ ಮನವಿ

Updated on: Apr 17, 2026 | 2:01 PM

ಖಾಸಗಿ ಶಾಲೆಗಳ ಒಕ್ಕೂಟವು ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಹಿಂದಿಗೆ 8 ಹೆಚ್ಚುವರಿ ಗ್ರೇಸ್ ಅಂಕಗಳನ್ನು ನೀಡಲು ಒತ್ತಾಯಿಸಿದೆ. ಗ್ರೇಡ್ ಬದಲಿಗೆ ಅಂಕ ನೀಡುವಂತೆ ಹೈಕೋರ್ಟ್ ಸೂಚಿಸಿದ ಬೆನ್ನಲ್ಲೇ ಹಿಂದಿ ಭಾಷೆಯ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡುವಂತೆ ಮನವಿ ಮಾಡಲಾಗಿದೆ. ಸರ್ಕಾರದ ಗೊಂಲದ ನಿರ್ಧಾರದಿಂದ ಫಲಿತಾಂಶ ಕುಸಿತ ಭೀತಿಯಿಂದ ಈ ಮನವಿ ಮಾಡಲಾಗಿದೆ.

ಬೆಂಗಳೂರು, ಏಪ್ರಿಲ್ 17: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಹಿಂದಿಗೆ 8 ಹೆಚ್ಚುವರಿ ಗ್ರೇಸ್ ಅಂಕಗಳನ್ನು ನೀಡುವಂತೆ ಮನವಿ ಮಾಡಿ ಖಾಸಗಿ ಶಾಲೆಗಳ ಒಕ್ಕೂಟವು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದೆ. ಈ ಕ್ರಮವು ಹಿಂದಿ ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಒಕ್ಕೂಟ ಹೇಳಿದೆ. ಪರೀಕ್ಷೆಗೆ ಕೆಲವೇ ದಿನಗಳಿರುವಾಗ ಸರ್ಕಾರ ತೃತೀಯ ಭಾಷೆಗೆ ಗ್ರೇಡ್ ನೀಡುವುದಾಗಿ ತಿಳಿಸಿತ್ತು. ಆದರೆ, ನ್ಯಾಯಾಲಯವು ಈ ನಿರ್ಧಾರವನ್ನು ರದ್ದುಗೊಳಿಸಿ, ಗ್ರೇಡ್‌ಗಳ ಬದಲಿಗೆ ವಿದ್ಯಾರ್ಥಿಗಳಿಗೆ ಅಂಕಗಳನ್ನೇ ನೀಡಬೇಕು ಎಂದು ಸೂಚಿಸಿತ್ತು. ಆದರೆ, ಸರ್ಕಾರದ ಗ್ರೇಡ್ ನಿರ್ಧಾರದ ಘೋಷಣೆ ನಂತರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೃತೀಯ ಭಾಷೆಯನ್ನು ಗಂಭೀರವಾಗಿ ಪರಿಗಣಿಸಿದ ಕಾರಣ ಈಗ ಫಲಿತಾಂಶ ಕುಸಿತದ ಭೀತಿ ಎದುರಾಗಿದೆ. ಹೀಗಾಗಿ ನಿರ್ದಿಷ್ಟವಾಗಿ ಹಿಂದಿ ಭಾಷೆಗೆ 8 ಗ್ರೇಸ್ ಮಾರ್ಕ್ಸ್ ನೀಡಬೇಕೆಂದು ಒತ್ತಾಯಿಸುತ್ತಿದೆ.

ಈ ಮನವಿಯಿಂದಾಗಿ ಹಿಂದಿ ವಿಷಯದಲ್ಲಿ ಉತ್ತೀರ್ಣರಾಗಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More