AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಗೊಂದಲ: SSLC  ಫಲಿತಾಂಶ ವಿಳಂಬ, ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

ಹಿಂದಿ ಗೊಂದಲ: SSLC ಫಲಿತಾಂಶ ವಿಳಂಬ, ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

ರಮೇಶ್ ಬಿ. ಜವಳಗೇರಾ
|

Updated on:Apr 21, 2026 | 3:04 PM

Share

ಎಸ್‌ಎಸ್‌ಎಲ್‌ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ರಾಜ್ಯ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್​​ ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್ದು, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸುವ ಮುನ್ನ ಪರೀಕ್ಷಾ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ. ಇನ್ನು ಇತ್ತ ರಾಜ್ಯ ಸರ್ಕಾರ ಈ ಸಂಬಂಧ ಇನ್ನೂ ಯಾವುದೇ ಸ್ಪಷ್ಟ ತೀರ್ಮಾನಗೊಂಡಿಲ್ಲ. ಹೀಗಾಗಿ ಎಸ್​​ಎಸ್​ಎಲ್​​ಸಿ ಫಲಿತಾಂಶ ಇನ್ನಷ್ಟು ವಿಳಂಬವಾಗಲಿದೆ.

ಬೆಂಗಳೂರು, (ಏಪ್ರಿಲ್ 21): ಎಸ್‌ಎಸ್‌ಎಲ್‌ಸಿ ಹಿಂದಿ (SSLC Hindi) ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ರಾಜ್ಯ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್​​ (Karnataka High Court) ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್ದು, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸುವ ಮುನ್ನ ಪರೀಕ್ಷಾ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ. ಇನ್ನು ಈ ಹೈಕೋರ್ಟ್ ಆದೇಶದ ಬಗ್ಗೆ ಸಿಎಂ ಜತೆ ಮಾತನಾಡುವುದಾಗಿ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಹೀಗಾಗಿ ಎಸ್​​ಎಸ್​ಎಲ್​​ಸಿ ಫಲಿತಾಂಶ ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.

ಇನ್ನು ಈ ಬಗ್ಗೆ ಟಿವಿ9ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಪ್ರತಿಕ್ರಿಯಿಸಿದ್ದು, ಈ ಮೊದಲು ಹೈಕೋರ್ಟ್ ನಮ್ಮ ಪರವಾಗಿ ಹೇಳಿತ್ತು. ಯಾರು ಅರ್ಜಿ ಹಾಕಿದ್ದರು ಅವರಿಗೆ ದಂಡ ಹಾಕಿತ್ತು. ಈಗ ಯಾರೋ ಅರ್ಜಿ ಸಲ್ಲಿಸಿದ್ದು, ಅದರನ್ವಯ ಈ ವರ್ಷ ಬೇಡ, ಮುಂದಿನ ವರ್ಷ ನೀವು ಮಾಡಿ ಎಂದು ಆದೇಶ ನೀಡಿದೆ. ಈ ವರ್ಷ ಅಂಕ ನೀಡಿ ಎಂದಿದ್ದಾರೆ. ಆದ್ರೆ ನಾನು ಇನ್ನೂ ಆರ್ಡರ್ ನೋಡಿಲ್ಲ. ನನಗೆ ಎಜಿ ಮತ್ತು ಡಿಪಾರ್ಟ್ಮೆಂಟ್ ಅವರು ಹೇಳಿದ್ದರು. ನಾನು ಈ ಮಾಹಿತಿ ಯನ್ನ ಸಿಎಂ ಅವರಿಗೆ ಹೇಳಿದ್ದೇನೆ. ಅವರು ಈಗ ಮೈಸೂರಲ್ಲಿದ್ದಾರೆ, ಇಂದು (ಏಪ್ರಿಲ್ 21) ಸಂಜೆ ಬರ್ತಾರೆ. ನಾಳೆ (ಏಪ್ರಿಲ್ 22) ಅವರ ಬಳಿ ಮಾತಾಡಿ ಮುಂದೆ ಏನು ಮಾಡಬೇಕು ಎಂದು ಚರ್ಚೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲಿಗೆ ಅಂಕ: ಹೈಕೋರ್ಟ್ ಆದೇಶ ಮರುಪರಿಶೀಲನಾ ಅರ್ಜಿ ಇತ್ಯರ್ಥ

Published on: Apr 21, 2026 02:52 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More