ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಕೊಲೆ
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಸಂಕೇತ್ ಕೊಲೆ ನಡೆದಿದೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆ ಬಳಿ ವಿದ್ಯಾರ್ಥಿಗಳ ನಡುವಿನ ಜಗಳ ಬಿಡಿಸಲು ಹೋದ ಸಂಕೇತ್ ಮೇಲೆ ಹಲ್ಲೆ ನಡೆದಿದ್ದು, ಎದೆಗೆ ಬಲವಾದ ಗುದ್ದಿದ ಪರಿಣಾಮ ಆತ ಮೃತಪಟ್ಟಿದ್ದಾನೆ. ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಮಾಹಿತಿ ನೀಡಿದ್ದಾರೆ. ಮೃತ ಸಂಕೇತ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಕೇತ್ ಓದಿನಲ್ಲಿ ಚುರುಕಾಗಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Published on: Feb 24, 2026 06:28 AM
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
