ಕರ್ನಾಟಕದಲ್ಲಿ ಲೋಡ್ ಶೆಡ್ಡಿಂಗ್: ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರು, ವಿದ್ಯಾರ್ಥಿಗಳು ಪರದಾಟ
ಕರ್ನಾಟಕದಲ್ಲಿ ಬೇಸಿಗೆ ಬೆನ್ನಲ್ಲೇ ಅನಿಯಮಿತ ಲೋಡ್ ಶೆಡ್ಡಿಂಗ್ ಶುರುವಾಗಿದೆ. ದುರಸ್ತಿ, ಕೆಲಸ, ಕಾರ್ಯಗಳ ನೆಪದಲ್ಲಿ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ. ವಿದ್ಯುತ್‌ನ ಕಣ್ಣಾಮುಚ್ಚಾಲೆಯಿಂದ ಗ್ರಾಮೀಣ ಭಾಗದ ರೈತರು ಹಾಗೂ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಒಂದು ಕಡೆ ಕರೆಂಟ್ ಇಲ್ಲದೇ ಬೆಳೆಗೆ ನೀರಿಲ್ಲದೇ ರೈತರು ಒದ್ದಾಡುತ್ತಿದ್ದರೆ, ಮತ್ತೊಂದೆಡೆ ಪರೀಕ್ಷೆ ಬರೆಯಲಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಸಹ ಪರದಾಡುವಂತಾಗಿದೆ.
ಬೆಳಗಾವಿ, (ಮಾರ್ಚ್ 19): ಕರ್ನಾಟಕದಲ್ಲಿ ಬೇಸಿಗೆ ಬೆನ್ನಲ್ಲೇ ಅನಿಯಮಿತ ಲೋಡ್ ಶೆಡ್ಡಿಂಗ್ ಶುರುವಾಗಿದೆ. ದುರಸ್ತಿ, ಕೆಲಸ, ಕಾರ್ಯಗಳ ನೆಪದಲ್ಲಿ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ. ವಿದ್ಯುತ್‌ನ ಕಣ್ಣಾಮುಚ್ಚಾಲೆಯಿಂದ ಗ್ರಾಮೀಣ ಭಾಗದ ರೈತರು ಹಾಗೂ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಒಂದು ಕಡೆ ಕರೆಂಟ್ ಇಲ್ಲದೇ ಬೆಳೆಗೆ ನೀರಿಲ್ಲದೇ ರೈತರು ಒದ್ದಾಡುತ್ತಿದ್ದರೆ, ಮತ್ತೊಂದೆಡೆ ಪರೀಕ್ಷೆ ಬರೆಯಲಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಸಹ ಪರದಾಡುವಂತಾಗಿದೆ. ಇದಕ್ಕೆ ಪೂಕರವೆಂಬಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಾಣಂತಿಕೊಡಿ ತೋಟದ ವಸತಿ, ಕೆರೂರ ಕೆಂಪಟ್ಟಿ ವಸತಿ ಪ್ರದೇಶದಲ್ಲಿ ವಿದ್ಯುತ್ ಇಲ್ಲದೇ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಓದಿಕೊಳ್ಳಲು ಸಮಸ್ಯೆಯಾಗಿದೆ. ವಿದ್ಯುತ್ ಕೈಕೊಡುತ್ತಿರುವುದರಿಂದ ವಿದ್ಯಾರ್ಥಿಗಳು ಮೇಣದ ಬತ್ತಿ, ಮೊಬೈಲ್ ಟಾರ್ಚ್ ನಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಬಗ್ಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಟಿವಿ9 ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.