SSLCಯಲ್ಲಿ 623 ಅಂಕ ಪಡೆದ ಕೃತಿಗೆ ಇಸ್ರೋದಲ್ಲಿ ಕೆಲಸ ಮಾಡುವ ಆಸೆ

Updated on: Apr 23, 2026 | 1:41 PM

ಕೃತಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕ ಗಳಿಸಿ ಟಾಪರ್ ಆಗಿದ್ದಾಳೆ. ಶಿವಮೊಗ್ಗದ ಪ್ರಿಯದರ್ಶಿನಿ ಶಾಲೆ ವಿದ್ಯಾರ್ಥಿನಿಯಾದ ಇವಳು ವಿಜ್ಞಾನ ವಿಭಾಗದಲ್ಲಿ ಉನ್ನತ ಶಿಕ್ಷಣ ಪಡೆದು ಇಂಜಿನಿಯರಿಂಗ್ ಸೇರಲು ಇಚ್ಛಿಸಿದ್ದಾಳೆ. ಇಸ್ರೊದಲ್ಲಿ ವಿಜ್ಞಾನಿಯಾಗಿ ದೇಶಕ್ಕೆ ಕೊಡುಗೆ ನೀಡುವ ಕನಸನ್ನು ಹೊಂದಿದ್ದಾಳೆ. ಹಿಂದಿ ಅಂಕದ ಗೊಂದಲ ನಿವಾರಣೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾಳೆ.

ಶಿವಮೊಗ್ಗ, ಏ.23:  ಕೃತಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಶಿವಮೊಗ್ಗದ ಪ್ರಿಯದರ್ಶಿನಿ ಶಾಲೆ ವಿದ್ಯಾರ್ಥಿನಿಯಾದ ಕೃತಿ ತನ್ನ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾಳೆ. ಆಕೆಯ ಮುಂದಿನ ಹೆಜ್ಜೆಗಳು ಮತ್ತು ಭವಿಷ್ಯದ ಕನಸುಗಳ ಕುರಿತು ಮಾತನಾಡಿದ್ದಾಳೆ. ಕೃತಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಂಡು ಜೆಇಇ ಪರೀಕ್ಷೆ ಬರೆದು ಇಂಜಿನಿಯರಿಂಗ್ ಸೇರಲು ಆಸಕ್ತಿ ಹೊಂದಿದ್ದಾಳೆ. ಇಂಜಿನಿಯರಿಂಗ್ ಶಿಕ್ಷಣದ ನಂತರ ಖಗೋಳ ವಿಜ್ಞಾನ (Astronomy) ಕ್ಷೇತ್ರದಲ್ಲಿ ಮುಂದುವರಿಯುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಾಳೆ. ಬೆಂಗಳೂರಿನಲ್ಲಿರುವ ಇಸ್ರೊ ಕೇಂದ್ರದಲ್ಲಿ ಕೆಲಸ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವ ಗುರಿ ಆಕೆಯದಾಗಿದೆ. ಒಬ್ಬ ಸೈಂಟಿಸ್ಟ್ ಆಗಿ ಸಂಶೋಧನೆ ಅಥವಾ ಆಸ್ಟ್ರೋನಾಟ್ ಆಗಿ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಕನಸು ಕೃತಿಗಿದೆ. ಹಿಂದಿ ಭಾಷೆಯ ಅಂಕಗಳ ಕುರಿತ ಗೊಂದಲ ನಿವಾರಣೆಯಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾಳೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More