ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಕಾಲ್ತುಳಿತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿದ ನಂತರ ಉಂಟಾದ ಕಾಲ್ತುಳಿತದಲ್ಲಿ ಜನರು ಸಾವನ್ನಪ್ಪಿದ್ದಾರೆ. ಘಟನೆಯ ವಿವರವಾದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹರಿದ್ವಾರ, ಜುಲೈ 27: ಹರಿದ್ವಾರದ ಮಾನಸದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಕಾಲ್ತುಳಿತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿದ ನಂತರ ಉಂಟಾದ ಕಾಲ್ತುಳಿತದಲ್ಲಿ ಜನರು ಸಾವನ್ನಪ್ಪಿದ್ದಾರೆ. ಘಟನೆಯ ವಿವರವಾದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.
ಭಾನುವಾರ ಹರಿದ್ವಾರದ ಮಾನಸ ದೇವಿ ದೇವಸ್ಥಾನದ ಪಾದಚಾರಿ ಮಾರ್ಗದ ಮೇಲೆ ಹಠಾತ್ತನೆ ಹೈ ವೋಲ್ಟೇಜ್ ವಿದ್ಯುತ್ ತಂತಿ ಬಿದ್ದ ಪರಿಣಾಮ ಜನರು ಚೆಲ್ಲಾಪಿಲ್ಲಿಯಾಗಿ ಓಡಲು ಶುರು ಮಾಡಿದರು. ಅಲ್ಲಿದ್ದ ಭಕ್ತರಲ್ಲಿ ಕಾಲ್ತುಳಿತ ಉಂಟಾಯಿತು. ಪೊಲೀಸರು ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ತಲುಪಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಲಾಯಿತು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

