ತಿರುಪತಿಯಲ್ಲಿ ಕಾಲ್ತುಳಿತ: ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ತಿರುಪತಿಯಲ್ಲಿ ವೈಕುಂಠ ಏಕಾದಶಿಯ ದಿನದಂದು ಸಂಭವಿಸಿದ ಕಾಲ್ತುಳಿತದಲ್ಲಿ ಆರು ಭಕ್ತರು ಮೃತಪಟ್ಟಿದ್ದಾರೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಟಿವಿ9 ಜೊತೆ ಮಾತನಾಡಿ, ದುರಂತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕರ್ನಾಟಕದ ಯಾವುದೇ ಭಕ್ತರಿಗೆ ತೊಂದರೆ ಆಗಿಲ್ಲ. ಅಲ್ಲದೆ, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರು, ಜನವರಿ 09: ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ದಾರುಣ ಸಾವು ಸಂಭವಿಸಿದೆ. ಈ ವಿಚಾರವಾಗಿ ನಗರದಲ್ಲಿ ಟಿವಿ9ಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalingareddy) ಪ್ರತಿಕ್ರಿಯಿಸಿದ್ದು, ನಾಳೆ ವೈಕುಂಠ ಏಕಾದಶಿ ಇರುವುದರಿಂದ ಹೆಚ್ಚಿನ ಭಕ್ತರು ಹೋಗಿದ್ದಾರೆ. ತಿಮ್ಮಪ್ಪನ ದರ್ಶನಕ್ಕೆ ಹೆಚ್ಚಿನ ಭಕ್ತರು ಹೋಗಿದ್ದರಿಂದ ದುರಂತ ಸಂಭವಿಸಿದೆ. ದುರಂತದ ಬಗ್ಗೆ ನಮ್ಮ ಇಒರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಕರ್ನಾಟಕದಿಂದ ಹೋಗಿರುವ ಭಕ್ತರಿಗೆ ಯಾವುದೇ ತೊಂದರೆ ಆಗಿಲ್ಲ. ಭಕ್ತರಿಗೆ ಮೂಲ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಅಂತಾ ಇಒ ತಿಳಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಆಡಳಿತ ಮಂಡಳಿ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
