ಹಾಸನಾಂಬೆ ದರ್ಶನದಲ್ಲಿ ಕಾಲ್ತುಳಿತದ ಎಚ್ಚರಿಕೆ! ವಿಶೇಷ ಬಸ್ ವ್ಯವಸ್ಥೆ ರದ್ದು ಮಾಡಲು ಜಿಲ್ಲಾಧಿಕಾರಿಗೆ ಪತ್ರ
ಹಾಸನಾಂಬೆಯ ದರ್ಶನಕ್ಕೆ ರಾಜ್ಯದೆಲ್ಲೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಈ ಕುರಿತು ಹಾಸನ ಡಿಸಿಗೆ ಪತ್ರ ಬರೆದಿರುವ ಎಸ್ಪಿ, ವಿಶೇಷ ಬಸ್ ವ್ಯವಸ್ಥೆಯನ್ನು ರದ್ದು ಮಾಡುವಂತೆ ಕೋರಿದ್ದಾರೆ. ವಿಶೇಷ ಬಸ್ ಸೌಲಭ್ಯದಿಂದಾಗಿ ಎಲ್ಲಾ ಜಿಲ್ಲೆಯಿಂದ ಭಕ್ತರ ದಂಡು ಬಂದರೆ ಕಾಲ್ತುಳಿತ ಸಂಭವಿಸುವ ಸಾಧ್ಯತೆಯಿದೆ, ಅನಾಹುತವೇನಾದರು ಆದರೆ ನ ಆವು ಹೊಣೆಯಲ್ಲವೆಂದು ಪತ್ರದಲ್ಲಿ ತಿಳಿಸಲಾಗಿದೆ.
ಹಾಸನ, ಅಕ್ಟೋಬರ್ 19: ಹಾಸನಾಂಬೆಯ ದರ್ಶನಕ್ಕೆ ರಾಜ್ಯದೆಲ್ಲೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇದೀಗ ದರ್ಶನದ ವೇಳೆಯಲ್ಲಿ ಕಾಲ್ತುಳಿತ ಸಂಭವಿಸಬಹುದು ಎಂಬ ಭಯ ವ್ಯಕ್ತವಾಗುತ್ತಿದೆ. ಈ ಕುರಿತು ಹಾಸನ ಡಿಸಿಗೆ ಪತ್ರ ಬರೆದಿರುವ ಎಸ್ಪಿ, ವಿಶೇಷ ಬಸ್ ವ್ಯವಸ್ಥೆಯನ್ನು ರದ್ದು ಮಾಡುವಂತೆ ಕೋರಿದ್ದಾರೆ. ವಿಶೇಷ ಬಸ್ ಸೌಲಭ್ಯದಿಂದಾಗಿ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಕಾಲ್ತುಳಿತದಂತಹ ಅನಾಹುತಗಳು ಸಂಭವಿಸುವ ಸಾಧ್ಯತೆಯಿದೆ. ಒಂದು ವೇಳೆ ಹಾಗೇನಾದರೂ ಆದಲ್ಲಿ ನಾವು ಹೊಣೆಯಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Oct 19, 2025 08:28 AM
Latest Videos

