AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ: ನಟ ಅನಂತ್ ನಾಗ್​ಗೆ ವಿಶೇಷ ಗೌರವ ಸಮರ್ಪಣೆ

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ: ನಟ ಅನಂತ್ ನಾಗ್​ಗೆ ವಿಶೇಷ ಗೌರವ ಸಮರ್ಪಣೆ

ಮದನ್​ ಕುಮಾರ್​
|

Updated on: Sep 22, 2026 | 6:12 PM

Share

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ಹಿರಿಯ ನಟ ಅನಂತ್ ನಾಗ್‌ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಸಮಾರಂಭದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಮಾಡುವ ವೇಳೆ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಿದರು.

ಗುಜರಾತ್‌ನ ಏಕತಾ ನಗರದಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ಹಿರಿಯ ನಟ ಅನಂತ್ ನಾಗ್‌ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಸಮಾರಂಭದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಮಾಡುವ ವೇಳೆ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಿದರು. ಐದು ದಶಕಗಳಿಗೂ ಹೆಚ್ಚು ಕಾಲ ಅನಂತ್ ನಾಗ್ ಅವರು ಕಲಾ ಸೇವೆ ಸಲ್ಲಿಸಿದ್ದಾರೆ. ಅವರ ಈ ಕೊಡುಗೆಗಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ಅನಂತ್ ನಾಗ್‌ ಅವರು ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೇ ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಯ ಸಿನಿಮಾಗಳಲ್ಲಿ ಅಭಿನಯಿಸಿ ಅವರು ಮನರಂಜನೆ ನೀಡಿದ್ದಾರೆ. 2025ರಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈಗ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us