ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ ಕರ್ನಾಟಕ ಅಹಿಂದ ಸಂಘಟನೆ

ಕರ್ನಾಟಕದ ರಾಜ್ಯಪಾಲರು ಬಿಜೆಪಿಯ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ, ರಾಜ್ಯದ ಜನ ಅವರ ವಿರುದ್ಧ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ ಮತ್ತು ರಾಷ್ಟ್ರಪತಿಗಳು ಅವರನ್ನು ಬೇಗ ವಾಪಸ್ಸು ಕರೆಸಿಕೊಳ್ಳದಿದ್ದರೆ ಜನ ದೊಂಬಿ ಏಳಬಹುದು, ಗಲಭೆಗಳು ತಲೆದೋರಬಹುದು ಎಂದು ವೆಂಕಟೇಶ್ ಗೌಡ ಹೇಳಿದರು.

ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ ಕರ್ನಾಟಕ ಅಹಿಂದ ಸಂಘಟನೆ
|

Updated on:Aug 23, 2024 | 3:06 PM

ದೆಹಲಿ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅನುಮತಿ ನೀಡಿರರುವುದನ್ನು ಖಂಡಿಸಿ ಕರ್ನಾಟಕ ಅಹಿಂದ ಸಂಘಟನೆಯು ರಾಷ್ಟ್ರಪತಿಯವರಿಗೆ ದೂರು ಸಲ್ಲಿಸಿದ ಬಳಿಕ ಸಂಘಟನೆಯ ಸಂಚಾಲಕ ವೆಂಕಟೇಶ್ ಗೌಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶ ಕಂಡ ಅಪ್ರತಿಮ ಮತ್ತು ನಿಷ್ಠಾವಂತ ರಾಜಕಾರಣಿಯಾಗಿದ್ದಾರೆ, ಆದರೆ ಅವರ ವಿರುದ್ಧ ಪೊಲೀಸರಾಗಲೀ ಅಥವಾ ತನಿಖಾ ಸಂಸ್ಥೆಗಳಾಗಲೀ ಪ್ರಾಸಿಕ್ಯೂಷನ್ ಅನುಮತಿ ಕೋರಿಲ್ಲವಾದರೂ ರಾಜ್ಯಪಾಲರು ಕೇವಲ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಒತ್ತಡಕ್ಕೆ ಮಣಿದು ಅನುಮತಿಯನ್ನು ನೀಡಿದ್ದಾರೆ ಎಂದು ವೆಂಕಟೇಶ್ ಗೌಡ ಹೇಳಿದರು. ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇಕಡ 80ರಷ್ಟಿರುವ ಅಹಿಂದ ವರ್ಗಗಳ ನೆಚ್ಚಿನ ನಾಯಕರಾಗಿದ್ದಾರೆ, ನಾವೆಲ್ಲ ರಾಜ್ಯಪಾಲರ ವಿರುದ್ಧ ಒಂದು ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಪ್ರತಿಸಲ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ ಎಂದು ಗೌಡ ಹೇಳಿದರು. ಒಬ್ಬ ನಿಷ್ಠಾವಂತ ರಾಜಕಾರಣಿಯ ವಿರುದ್ಧ ಸಂವಿಧಾನಬಾಹಿರವಾಗಿ ವರ್ತಿಸುತ್ತಿರುವ ಕರ್ನಾಟಕದ ರಾಜ್ಯಪಾಲರನ್ನು ಕೂಡಲೇ ವಾಪಸ್ಸು ಕರೆಸಿಕೊಳ್ಳಬೇಕೆಂದು ರಾಷ್ಟ್ರಪತಿಯವರಿಗೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    Siddaramaiah Presser: ನಲ್ವತ್ತಕ್ಕೂ ಹೆಚ್ಚು ವರ್ಷಗಳ ನನ್ನ ರಾಜಕೀಯ ಬದುಕಿನಲ್ಲಿ ಒಂದು ಕಪ್ಪು ಚುಕ್ಕೆಯೂ ಇಲ್ಲ: ಸಿದ್ದರಾಮಯ್ಯ

Published On - 3:05 pm, Fri, 23 August 24

Follow us
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ