ರಾಜ್ಯದಲ್ಲಿ ಬಿಜೆಪಿ ರಿಪೇರಿಯಾಗದಷ್ಟು ಹದಗೆಟ್ಟಿದೆ: ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯ

ರಾಜ್ಯದಲ್ಲಿ ಬಿಜೆಪಿ ರಿಪೇರಿಯಾಗದಷ್ಟು ಹದಗೆಟ್ಟಿದೆ: ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 30, 2023 | 4:01 PM

ದಶಕಗಳ ಕಾಲ ರಾಜ್ಯ ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಜಗದೀಶ್ ಶೆಟ್ಟರ್ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ ತಮಗೆ ಟಿಕೆಟ್ ನಿರಾಕರಿಸಿದ ಕಾರಣ ಬಂಡೆದ್ದು ಕಾಂಗ್ರೆಸ್ ಪಕ್ಷ ಸೇರಿದ್ದರು. ಕಾಂಗ್ರೆಸ್ ಟಿಕೆಟ್ ಪಡೆದು ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದು ಈಗ ಇತಿಹಾಸ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿ ಸೋಲಿನ ಕಹಿ ಕಡಿಮೆಯಾಗಿಸುವ ಪ್ರಯತ್ನ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ರಿಪೇರಿಯಾಗಲಾರದಷ್ಟು ಹದಗೆಟ್ಟಿದೆ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ (Jagadish Shettar) ಹೇಳಿದರು. ಹುಬ್ಳಳ್ಳಿಯ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಶೆಟ್ಟರ್, ಬಿವೈ ವಿಜಯೇಂದ್ರ (BY Vijayendra) ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿದ ಕಾರಣ ಮುಂಬರುವ ಲೋಕಸಭ ಚುನಾವಣೆಯಲ್ಲಿ ಚಮತ್ಕಾರ ನಡೆಯಲಿದೆ ಅಂತ ಭಾವಿಸುವ ಅವಶ್ಯಕತೆ ಇಲ್ಲ, 2018 ವಿಧಾನಸಭ ಚುನಾವಣೆಯಲ್ಲಿ ಬಿಎಸ್ ಯಡಿಯೂರಪ್ಪನವರ (BS Yediyurappa) ನೇತೃತ್ವದಲ್ಲಿ ಪಕ್ಷ ಹೋರಾಡಿದರೂ 104 ಸ್ಥಾನ ಗೆಲ್ಲುವಲ್ಲಿ ಮಾತ್ರ ಯಶ ಕಂಡಿತ್ತು ಎಂದು ಅವರು ಹೇಳಿದರು. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ 66 ಸೀಟು ದಕ್ಕಿದ್ದವು, ಒಂದು ಪಕ್ಷ ರಾಜ್ಯದಲ್ಲಿ ಈಗ ವಿಧಾನಸಭಾ ಚುನಾವಣೆ ನಡೆಸಿದರೆ ಅದಕ್ಕೆ 40 ಸ್ಥಾನ ಕೂಡ ಸಿಗೋದಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ