ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು: ಎಂಬಿ ಪಾಟೀಲ್, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Sep 01, 2023 | 6:15 PM

ಬಿಜೆಪಿ ಹಲವಾರು ನಾಯಕರು ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಅವರು ಹೆಸರುಗಳನ್ನು ಈಗ ಬಹಿರಂಗಪಡಿಲಾಗದು ಎಂದು ಪಾಟೀಲ್ ಹೇಳಿದರು. ಗುರುವಾರ ಸಂತೋಷ್ ನಡೆಸಿದ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಯಾಕೆ ಭಾಗಿಯಾಗಲಿಲ್ಲ ಅಂತ ಕೇಳಿದ ಪ್ರಶ್ನೆಗೆ ಅವರು, ಅದು ತನಗೆ ಹೇಗೆ ಗೊತ್ತಾಗಬೇಕು, ಸಂತೋಷ್ ಅವರನ್ನೇ ಕೇಳಬೇಕು ಎಂದು ಎಂಬಿ ಪಾಟೀಲ್ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ (MB Patil) ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು ಎಂದು ಹೇಳಿದರು. ನಿನ್ನೆ ಬಿಎಲ್ ಸಂತೋಷ್ (BL Santosh), ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತನ್ನ ಸಂಪರ್ಕದಲ್ಲಿದ್ದಾರೆ ಅಂತ ಹೇಳಿರುವುದನ್ನು ಅಪಹಾಸ್ಯ ಮಾಡಿದ ಪಾಟೀಲ್, ತಮ್ಮ ಹಡಗು ಮುಳುಗುತ್ತಿದೆ ಅಂತ ಅವರಿಗೆ ಗೊತ್ತಿದೆ, ಡ್ಯಾಮೇಜ್ ಕಂಟ್ರೋಲ್ ಮಾಡುವುದಕ್ಕೋಸ್ಕರ ಅವರು ಹಾಗೆ ಹೇಳುತ್ತಿದ್ದಾರೆ ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಟ 15ರಿಂದ 20 ಸ್ಥಾನ ಗೆಲ್ಲಲಿದೆ ಎಂದು ಅವರು ಹೇಳಿದರು. ಬಿಜೆಪಿ ಹಲವಾರು ನಾಯಕರು ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಅವರು ಹೆಸರುಗಳನ್ನು ಈಗ ಬಹಿರಂಗಪಡಿಲಾಗದು ಎಂದು ಪಾಟೀಲ್ ಹೇಳಿದರು. ಗುರುವಾರ ಸಂತೋಷ್ ನಡೆಸಿದ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ (BS Yediyurappa) ಯಾಕೆ ಭಾಗಿಯಾಗಲಿಲ್ಲ ಅಂತ ಕೇಳಿದ ಪ್ರಶ್ನೆಗೆ ಅವರು, ಅದು ತನಗೆ ಹೇಗೆ ಗೊತ್ತಾಗಬೇಕು, ಸಂತೋಷ್ ಅವರನ್ನೇ ಕೇಳಬೇಕು ಎಂದು ಎಂಬಿ ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.