ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ (JC Madhu Swamy) ಅವರು ಬಜೆಟ್ ಅಧಿವೇಶನ (Budget Session) ಫೆಬ್ರುವರಿ 10 ರಿಂದ ಆರಂಭವಾಗಲಿದೆಯೆಂದು ಹೇಳಿದರು. ಅಂದು ರಾಜ್ಯಪಾಲರು (governor) ಎರಡೂ ಸದನಗಳನ್ನುದ್ದೇಶಿಸಿ ಮಾತಾಡಲಿದ್ದಾರೆ ಮತ್ತು ನಂತರದ ದಿನಗಳಲ್ಲಿ ಅವರ ಭಾಷಣದ ಮೇಲೆ ಚರ್ಚೆ ನಡೆಯುತ್ತದೆ ಎಂದು ಮಾಧುಸ್ವಾಮಿ ಹೇಳಿದರು. ಫೆಬ್ರುವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರು 2023-24 ಸಾಲಿನ ಆಯವ್ಯಯ ಪತ್ರ ಮಂಡಿಸಲಿದ್ದಾರೆ ಎಂದು ಸಚಿವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ