State Budget Session | ಅಧಿವೇಶನ ಫೆಬ್ರುವರಿ 10 ರಿಂದ ಆರಂಭವಾಗಲಿದೆ: ಮಾಧುಸ್ವಾಮಿ, ಕಾನೂನು ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Jan 20, 2023 | 5:28 PM

ಫೆಬ್ರುವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರು 2023-24 ಸಾಲಿನ ಆಯವ್ಯಯ ಪತ್ರ ಮಂಡಿಸಲಿದ್ದಾರೆ ಎಂದು ಸಚಿವರು ಹೇಳಿದರು.

ಬೆಂಗಳೂರು:  ರಾಜ್ಯ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ (JC Madhu Swamy) ಅವರು ಬಜೆಟ್ ಅಧಿವೇಶನ (Budget Session) ಫೆಬ್ರುವರಿ 10 ರಿಂದ ಆರಂಭವಾಗಲಿದೆಯೆಂದು ಹೇಳಿದರು. ಅಂದು ರಾಜ್ಯಪಾಲರು (governor) ಎರಡೂ ಸದನಗಳನ್ನುದ್ದೇಶಿಸಿ ಮಾತಾಡಲಿದ್ದಾರೆ ಮತ್ತು ನಂತರದ ದಿನಗಳಲ್ಲಿ ಅವರ ಭಾಷಣದ ಮೇಲೆ ಚರ್ಚೆ ನಡೆಯುತ್ತದೆ ಎಂದು ಮಾಧುಸ್ವಾಮಿ ಹೇಳಿದರು. ಫೆಬ್ರುವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರು 2023-24 ಸಾಲಿನ ಆಯವ್ಯಯ ಪತ್ರ ಮಂಡಿಸಲಿದ್ದಾರೆ ಎಂದು ಸಚಿವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jan 20, 2023 04:24 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.